ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಟಾಕಿ ಸಿಡಿಸಿ ಪರಿಸರ ಹಾಳು ಮಾಡಬೇಡಿ ಎಂದ ಡಿಕೆಶಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮಾರ್ಚ್ 12: ನನ್ನ ಅಭಿನಂದನೆಗೆ ಪಟಾಕಿ ಸಿಡಿಸಿ ಪರಿಸರ ಹಾಳು ಮಾಡಬೇಡಿ, ದುಂದು ವೆಚ್ಚ ಬೇಡ ಎಂದು ನೂತನ ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷನಾಗಿದ್ದಕ್ಕೆ ನನಗೆ ಅಭಿನಂದನೆ ಸಲ್ಲಿಸುವ ಬರದಲ್ಲಿ, ಅಭಿಮಾನಿಗಳು ಪಟಾಕಿ ಸಿಡಿಸಿ ಪರಿಸರ ಹಾಳು ಮಾಡಬೇಡಿ ಹಾಗೂ ಸುಮ್ಮನೆ ದುಂದು ವೆಚ್ಚ ಮಾಡಬೇಡಿ, ಎಂದು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿ ತಮ್ಮ ಬೆಂಬಲಿಗರಿಗೆ ಸಂದೇಶ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷನಾಗಿ ಡಿಕೆಶಿ; ಹುಟ್ಟೂರು ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಸಂಭ್ರಮಕೆಪಿಸಿಸಿ ಅಧ್ಯಕ್ಷನಾಗಿ ಡಿಕೆಶಿ; ಹುಟ್ಟೂರು ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಸಂಭ್ರಮ

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಕ್ಷಣದಿಂದ ಡಿಕೆಶಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿದ ಡಿಕೆಶಿ, ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ತಮ್ಮ ಬೆಂಬಲಿಗರಿಗೆ ತಿಳುವಳಿಕೆ ಮೂಡಿಸಲು ಪ್ರಯತ್ನಿಸಿದ್ದಾರೆ.

KPCC President DK Shivakumar Press Released Today

ನಿಮ್ಮಲ್ಲರ ಪ್ರೀತಿ, ವಿಶ್ವಾಸ ಹಾಗೂ ವರಿಷ್ಠರ ಅಶೀರ್ವಾದದಿಂದ ನನಗೆ ಈ ಪದವಿ ಸಿಕ್ಕಿದ್ದು, ನಿಮ್ಮ ಪ್ರೀತಿ ವಿಶ್ವಾಸ ಮತ್ತು ಹಾರೈಕೆಗೆ ನಾನು ಅಭಾರಿ ಎಂದು ಕೃತಜ್ಞತೆ ಸಲ್ಲಿಸಿರುವ ಡಿಕೆಶಿ, ನನ್ನನ್ನು ಅಭಿನಂದಿಸುವಾಗ, ಪಕ್ಷದ ಕಚೇರಿಯಲ್ಲಿ, ರಾಜ್ಯ ಪ್ರವಾಸದ ಸಮಯದಲ್ಲಿ ಅಥವಾ ನಾನು ಭಾಗವಹಿಸುವ ಸಭೆಗಳಲ್ಲಿ ದುಂದು ವೆಚ್ಚಕ್ಕೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ನಿಮ್ಮ ಪ್ರೀತಿ ವ್ಯಕ್ತಪಡಿಸುವ ಬರದಲ್ಲಿ ಹಾರ, ತುರಾಯಿ, ಪೇಟ, ಗದೆ, ವಿಗ್ರಹ, ಭಾವಚಿತ್ರ ಮತ್ತಿತರ ಉಡುಗೊರೆ ನೀಡುವುದು ಬೇಡ. ಈ ನನ್ನ ಮನವಿಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಡಿ.ಕೆ.ಶಿವಕುಮಾರ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕ

ಕ್ರೇನ್ ಬಳಸಿ ದೊಡ್ಡ ದೊಡ್ಡ ಸೇಬಿನಹಾರ ಹಾಕುವುದು, ಜೆಸಿಬಿಯಿಂದ ಹೂವಿನ ರಾಶಿ ಸುರಿಯುವುದು, ಕೇಕ್ ಕತ್ತರಿಸುವುದು, ಸಿಹಿ ತನ್ನಿಸುವುದು ಸೇರಿದಂತೆ ಪಟಾಕಿ ಸಿಡಿಸಿ ಪರಿಸರ ಹಾಳು ಮಾಡಬೇಡಿ ದುಂದು ವೆಚ್ಚ ಬೇಡವೇ ಬೇಡ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

English summary
KPCC President DK Shivakumar has been Press Released To his Supporters Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X