• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ಹಾಗೂ ವಿಜಯೇಂದ್ರಗೆ ಧನ್ಯವಾದ ಹೇಳಿದ KRIDL ನೂತನ ಅಧ್ಯಕ್ಷ ಎಂ.ರುದ್ರೇಶ್

By ರಾಮನಗರ ಪ್ರತಿನಿಧಿ
|

ರಾಮನಗರ, ನವೆಂಬರ್ 30: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (KRIDL) ನೂತನ ಅಧ್ಯಕ್ಷ ಹಾಗೂ ಸಿಎಂ ಯಡಿಯೂರಪ್ಪನವರ ಆಪ್ತ ಬಿಜೆಪಿ ಮುಖಂಡ, ಎಂ.ರುದ್ರೇಶ್ ಇಂದು ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾರ್ಯಕರ್ತರ ಜೊತೆ ಪೂಜೆ ಸಲ್ಲಿಸಿದರು. ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಮನಗರಕ್ಕೆ ಭೇಟಿ ನೀಡಿದರು.

ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ರುದ್ರೇಶ್, ""ನನ್ನನ್ನು ಗುರುತಿಸಿ ನಿಗಮ ಮಂಡಳಿಯ ಅಧ್ಯಕ್ಷನನ್ನಾಗಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜೆಯೇಂದ್ರಗೆ ಧನ್ಯವಾದ'' ತಿಳಿಸಿದರು. ಇದೇ ಸಂದರ್ಭದಲ್ಲಿ ಪಕ್ಷ ಅವಕಾಶ ಕೊಟ್ಟರೆ, ರಾಮನಗರದ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದರು.

ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ: ಎಚ್.ಡಿ ಕುಮಾರಸ್ವಾಮಿ

ಈ ಹಿಂದೆ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಕೇವಲ 1 ರಿಂದ 2 ಸಾವಿರ ಮತ ಗಳಿಸುತ್ತಿದ್ದರು. ಆದರೆ ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ಮತ ಬಂದಿದೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಮತ ಬಂದಿದೆ ಎಂದು ತಿಳಿಸಿದರು.

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಅಭಿವೃದ್ದಿ ಪರವಾದ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದಾರೆ. ಹಾಗಾಗಿ ಈ ಬಾರಿಯ ಪಂಚಾಯಿತಿ ಚುನಾವಣೆಯಲ್ಲಿ 4-5 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

   NR Santosh ಆತ್ಮಹತ್ಯೆ ಯತ್ನದ ಹಿಂದೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೈವಾಡ? | Oneindia Kannada

   ರಾಮನಗರದಲ್ಲಿ ಬಿಜೆಪಿ ಪಕ್ಷಕ್ಕೆ ಬಲ ಬರುತ್ತಿದ್ದು, ಈ ನಿಟ್ಟಿನಲ್ಲಿ KRIDL ನಿಗಮದ ಅಧ್ಯಕ್ಷರ ಅನುದಾನದ ಶೇ.75 ರಾಮನಗರಕ್ಕೆ ಕೊಡುಗೆ ನೀಡುತ್ತೇನೆ. ಆ ಮೂಲಕ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 2 ರಿಂದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು KRIDL ನೂತನ ಅಧ್ಯಕ್ಷ ಎಂ.ರುದ್ರೇಶ್ ಭವಿಷ್ಯ ನುಡಿದರು.

   English summary
   M Rudresh, the new President of the Karnataka Rural Infrastructure Development Corporation (KRIDL), worshiped with activists at Chamundeshwari Temple in Ramanagara today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X