ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಿ ತಿಂಗಳೂ ರಾಮನಗರಕ್ಕೆ ಭೇಟಿ, ಅಹವಾಲು ಸ್ವೀಕಾರ: ಎಚ್‌ಡಿಕೆ ಭರವಸೆ

By Manjunatha
|
Google Oneindia Kannada News

ರಾಮನಗರ, ಜುಲೈ 16: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಚಿವರಾದ ಡಿ.ಕೆ.ಶಿವಕುಮಾರ್, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ರೇವಣ್ಣ ಜೊತೆಗಿದ್ದರು.

ನಂತರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಿದರು.

ಸಂಪುಟ ವಿಸ್ತರಣೆ: ದೇವೇಗೌಡರ ಜೊತೆ ಕುಮಾರಸ್ವಾಮಿ ಮಹತ್ವದ ಚರ್ಚೆಸಂಪುಟ ವಿಸ್ತರಣೆ: ದೇವೇಗೌಡರ ಜೊತೆ ಕುಮಾರಸ್ವಾಮಿ ಮಹತ್ವದ ಚರ್ಚೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಪ್ರತಿ ತಿಂಗಳೂ ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವುದಲ್ಲದೆ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದಾಗಿ ತಿಳಿಸಿದರು.

Kumaraswamy inagurated many development programs in Ramanagar

ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್ ರಾಮನಗರದಲ್ಲಿ ಸ್ಥಾಪನೆಯಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಇದ್ದ ಭೂ ಒತ್ತುವರಿ ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ ಎಂದು ತಿಳಿಸಿದರು.

ಹಾಗಾದ್ರೆ.. ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರಿಗೆ ಅಸಲಿ ಕಾರಣಕರ್ತರಾರು?ಹಾಗಾದ್ರೆ.. ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರಿಗೆ ಅಸಲಿ ಕಾರಣಕರ್ತರಾರು?

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೇಷ್ಮೆ ಬೆಳಗಾರರಿಗೆ ಬೆಂಬಲ ಬೆಲೆ ನೀಡುವ ಕುರಿತು ಸಹ ಚರ್ಚೆ ನಡೆಸಿದರು.

Kumaraswamy inagurated many development programs in Ramanagar

ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.

English summary
Cm Kumaraswamy inaugurated many development programs in ramanagar today along with minister DK Shivakumar, SR Mahesh, CS Puttaraju.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X