• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಬಸಪ್ಪನ ಕ್ರೇತ್ರದಲ್ಲಿ ಲಕ್ಷ ದೀಪೋತ್ಸವದ ಸೊಬಗು

By ರಾಮನಗರ ಪ್ರತಿನಿಧಿ
|
Google Oneindia Kannada News

ಚನ್ನಪಟ್ಟಣ, ನವೆಂಬರ್‌, 24: ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ವಿಶ್ವದ ಅತಿ ಎತ್ತರದ ‌68 ಅಡಿಯುಳ್ಳ ಪಂಚಲೋಹದ ಚಾಮುಂಡೇಶ್ವರಿ ಪ್ರತಿಮೆ ನಿರ್ಮಾಣವಾಗಿದೆ. ಕ್ಷೇತ್ರದ ಪವಾಡ ಬಸಪ್ಪನವರ ಪುಣ್ಯಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವೂ ಅದ್ಧೂರಿಯಾಗಿ ಜರುಗಿತು.

ಕ್ಷೇತ್ರದ ಪವಾಡ ಬಸಪ್ಪನವರ ಹುಟ್ಟುಹಬ್ಬ ಹಾಗೂ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿದ್ದರು. ಈ ಮೂಲಕ ಅದ್ದೂರಿ ಲಕ್ಷ ದೀಪೋತ್ಸವವನ್ನು ಕಣ್ತುಂಬಿಕೊಂಡರು. ಲಕ್ಷ ದೀಪೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಪಾಂಡವಪುರದಲ್ಲಿ ನ. 25ರಿಂದ ಮೂರು ದಿನಗಳ ಪುನೀತೋತ್ಸವ; ಒಂದು ಸಾವಿರ ವಿದ್ಯಾರ್ಥಿನಿಯರಿಂದ ಗಾಯನಪಾಂಡವಪುರದಲ್ಲಿ ನ. 25ರಿಂದ ಮೂರು ದಿನಗಳ ಪುನೀತೋತ್ಸವ; ಒಂದು ಸಾವಿರ ವಿದ್ಯಾರ್ಥಿನಿಯರಿಂದ ಗಾಯನ

ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, ವಿಶೇಷ ಅಲಂಕಾರ, ತಾಯಿಯ ಮೆರವಣಿಗೆ, ಪವಾಡ ಬಸವಪ್ಪನ ಗದ್ದುಗೆಗೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಹಾಗೂ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಬಿ.ಶಿವಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ವಿವಿಧ ಗಣ್ಯರು, ಸರ್ಕಾರಿ ಅಧಿಕಾರಿಗಳು ಹಾಗೂ ಸಾವಿರಾರು ಭಕ್ತರು ದೀಪೋತ್ಸವದಲ್ಲಿ ಭಾಗಿಯಾಗಿದ್ದರು.

 ಗಮನ ಸೆಳೆದ ವಿದ್ಯುತ್ ದೀಪಾಲಂಕಾರ

ಗಮನ ಸೆಳೆದ ವಿದ್ಯುತ್ ದೀಪಾಲಂಕಾರ

ದೀಪೋತ್ಸವ ಅಂಗವಾಗಿ ಶ್ರೀಕ್ಷೇತ್ರದ ಆವರಣ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿತ್ತು. ಚಾಮುಂಡೇಶ್ವರಿ ವಿಗ್ರಹದ ಮಂದೆ ಹಚ್ಚಿದ ಹಣತೆಗಳ ಸಾಲಿನ ದೃಶ್ಯ ಕಣ್ಮನ ಸೆಳೆಯುವಂತಿತ್ತು. ಹಣತೆಗಳ ಬೆಳಕಿನಲ್ಲಿ ತಾಯಿಯ ವಿಗ್ರಹ ಭಕ್ತಗಣವನ್ನು ತನ್ನತ್ತ ಸೆಳೆಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಷ್ಟೇ ಅಲ್ಲದೇ ಅಕ್ಕಪಕ್ಕದ ಜಿಲ್ಲೆಯ ಸಾವಿರಾರು ಭಕ್ತಾದಿಗಳು ಭಾಗವಹಿಸಿ ಗಮನ ಸೆಳೆದರು. ಕ್ಷೇತ್ರದ ಆವರಣದಲ್ಲಿ ಸಿದ್ದಪಡಿಸಲಾಗಿದ್ದ ಸಾಲು ದೀಪಗಳಿಗೆ ಎಣ್ಣೆ, ಬತ್ತಿ ಹಾಕಿ ದೀಪ ಬೆಳಗಿಸುವ ಮೂಲಕ ಭಕ್ತರು ತಮ್ಮ ಭಕ್ತಿಭಾವ ಮೆರೆದರು.

ಇನ್ನು ಈ ಬಾರಿ ದೀಪೋತ್ಸವದ ಅಂಗವಾಗಿ ಬಾಣ ಬಿರುಸು ಪ್ರದರ್ಶನ ಹಾಗೂ ಮದ್ದು ಸಿಡಿಸುವ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಇದರೊಂದಿಗೆ ನಗರದ ಶ್ರೀಭವಾನಿ‌ ಕಲಾನಿಕೇತನ ನೃತ್ಯ ಸಂಸ್ಥೆಯ ವತಿಯಿಂದ ಭರತನಾಟ್ಯ ಪ್ರದರ್ಶನವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಹೀಗೆ ಪುಟಾಣಿ ಮಕ್ಕಳ ನೃತ್ಯ ಪ್ರದರ್ಶನ ಕಲಾರಸಿಕರ ಮನ ಸೆಳೆಯಿತು.

 ಅವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಿದರೆ ಕ್ರಿಮಿನಲ್ ಕೇಸ್ ಅವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಿದರೆ ಕ್ರಿಮಿನಲ್ ಕೇಸ್

 ತನ್ನದೇ ಇತಿಹಾಸ ಹೊಂದಿರುವ ದೀಪೋತ್ಸವ

ತನ್ನದೇ ಇತಿಹಾಸ ಹೊಂದಿರುವ ದೀಪೋತ್ಸವ

ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಮಾತನಾಡಿದ್ದು, ದೀಪೋತ್ಸವಕ್ಕೆ ತನ್ನದೇ ಆದ ಮಹತ್ತರವಾದ ಇತಿಹಾಸವಿದೆ. ಕಾರ್ತಿಕ ಮಾಸದಲ್ಲಿ ಸಾಕಷ್ಟು ಕಡೆ ನಡೆಯುವ ದೀಪೋತ್ಸವಕ್ಕೆ ತುಂಬಾ ಪ್ರಾಮುಖ್ಯತೆ ಇದೆ. ನಮ್ಮ ಕ್ಷೇತ್ರದಲ್ಲೂ ಶ್ರೀಪವಾಡ ಬಸಪ್ಪನವರ ಹುಟ್ಟು ಹಬ್ಬದ ಕಾರ್ಯಕ್ರಮ ಹಾಗೂ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ಲಕ್ಷ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿವರ್ಷವೂ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ಬಾರಿಯೂ ಅತಿಹೆಚ್ಚು ಭಕ್ತಾದಿಗಳು ದೀಪೋತ್ಸವದಲ್ಲಿ ಭಾಗಿಯಾಗಿ ದೀಪ ಬೆಳಗಿಸಿದ್ದಾರೆ. ಇಡೀ ಸಮಾಜಕ್ಕೆ ಒಳಿತಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿ ದೀಪವನ್ನು ಬೆಳಗಲಾಗಿದೆ ಎಂದು ತಿಳಿಸಿದರು.

 ನಿತ್ಯ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳ

ನಿತ್ಯ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳ

ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ‌ಮಾತನಾಡಿ, ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಎಂದು ಹೆಸರು ಪಡೆದಿರುವ ಗೌಡಗೆರೆ ಚಾಮುಂಡೇಶ್ವರಿ ಪುಣ್ಯ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನವೂ ಸಾವಿರಾರು ಜನ ಭಕ್ತರು ವಿಶ್ವದ ಅತಿ ಎತ್ತರದ ಪಂಚಲೋಹದ ಪ್ರತಿಮೆಯನ್ನು ನೋಡಲು ಬರುತ್ತಿರುವುದು ಸಂತಷದ ವಿಚಾರವಾಗಿದೆ. ಕ್ಷೇತ್ರದಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳು ಸಹ ವಿಶೇಷವಾಗಿರುತ್ತವೆ. ಲಕ್ಷ ದೀಪೋತ್ಸವದಲ್ಲಿ ಭಾಗಿಯಾಗಿರುವುದು ಮನಸ್ಸನ್ನು ಉಲ್ಲಾಸಗೊಳಿಸಿದೆ ಎಂದರು.

 ಲಕ್ಷ ದೀಪೋತ್ಸವಕ್ಕೆ ಆಗಮಿಸಿದದ್ದ ಭಕ್ತಗಣ

ಲಕ್ಷ ದೀಪೋತ್ಸವಕ್ಕೆ ಆಗಮಿಸಿದದ್ದ ಭಕ್ತಗಣ

ನಂತರ ‌ಗ್ರಾಮಾಂತರ ವೃತ್ತ ನಿರೀಕ್ಷಕ ಬಿ.ಶಿವಕುಮಾರ್ ಮಾತನಾಡಿ, ತಾಯಿಯ ಸನ್ನಿಧಾನದಲ್ಲಿ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಾಗಿದೆ. ಇದು ನನ್ನ ಜೀವನದ ಸೌಭಾಗ್ಯ ಸಂಗತಿಯಾಗಿದೆ. ವಿಶ್ವದ ಅತಿ ಎತ್ತರದ ಪಂಚಲೋಹದ ಪ್ರತಿಮೆ ಎಂದು ಹೆಸರುವಾಸಿಯಾಗಿರುವ ಗೌಡಗೆರೆ ಕ್ಷೇತ್ರದ ಪಂಚಲೋಹ ಪ್ರತಿಮೆಯನ್ನು ವೀಕ್ಷಿಸಲು ಕರ್ನಾಟಕವಲ್ಲದೆ ಬೇರೆ ಬೇರೆ ರಾಜ್ಯದಿಂದಲೂ ಸಹ ಭಕ್ತರು ಆಗಮಿಸುತ್ತಿದ್ದಾರೆ. ಇದು ತಾಲೂಕಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಬಣ್ಣಿಸಿದರು.

‌‌‌ಕಾರ್ಯಕ್ರಮದಲ್ಲಿ ಎಂ.ಕೆ. ದೊಡ್ಡಿ ಠಾಣೆ ಪಿಎಸ್‌ಐ ರತ್ಮಮ್ಮ, ದೇವಾಲಯದ ಆಡಳಿತ ಮಂಡಳಿ ಸದಸ್ಯರಾದ ದಯಾನಂದಸಾಗರ್, ಬಾಬು, ರಾಮಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

English summary
Lakshadeepotsava program held in Gowdagere village of Channapatna taluk, people from out of states came for Lakshadeepotsava program. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X