ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೇ ನಷ್ಟ, ಮಹಾರಾಷ್ಟ್ರಕ್ಕಲ್ಲ; ಎಚ್‌ಡಿಕೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಡಿಸೆಂಬರ್ 25: "ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆಯನ್ನು ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿ ನಿಷೇಧ ಮಾಡಬೇಕು," ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ಕರೆ ನೀಡಲಾಗಿದೆ. ಬಂದ್ ಮಾಡುವುದರಿಂದ ಏನು ಪ್ರಯೋಜನ? ಅನುಕೂಲ ಯಾರಿಗೆ? ಅನಾನುಕೂಲ ಯಾರಿಗೆ? ಅನ್ನೋದು ಮುಖ್ಯ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ಕರ್ನಾಟಕದ ಜನರಿಗೆ ತೊಂದರೆ ಆಗುತ್ತದೆ," ಎಂದು ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

"ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಾಮೇಷ ಇಲ್ಲದೇ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿ. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು," ಎಂದು ಎಚ್‌ಡಿಕೆ ಬಂದ್ ವಿರುದ್ಧ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.

Loss to Kannadigas From Karnataka Bandh, Not to Maharashtra Says HD Kumaraswamy

"ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು," ಎಂದು ಮಾಜಿ ಸಿಎಂ ಸಲಹೆ ನೀಡಿದರು.

ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್‌ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು.

ಪಕ್ಷದ ಯುವ ಜನತಾದಳದ ಅಧ್ಯಕ್ಷರಾದ ನಿಖಿಲ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಂದ್‌ನಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರು ಒಮ್ಮೆ ಈ ಬಗ್ಗೆ ಆಲೋಚನೆ ಮಾಡಲಿ ಎಂದು ಅವರು ಹೇಳಿದರು.

Loss to Kannadigas From Karnataka Bandh, Not to Maharashtra Says HD Kumaraswamy


ಬೆಳಗಾವಿ ಕಲಾಪ ವ್ಯರ್ಥವಾಗಿದೆ
ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕದ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಲಿಲ್ಲ. ಸದನ ಕಲಾಪವನ್ನು ಸಂಪೂರ್ಣ ವ್ಯರ್ಥ ಮಾಡಿದ್ದಾರೆ. ಅದರಲ್ಲೂ ಮೊದಲ 5 ದಿನದ ಕಲಾಪ ಸಂಪೂರ್ಣ ವ್ಯರ್ಥವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿಲ್ಲ, ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆಯೂ ಚರ್ಚಿಸಿಲ್ಲ. ಸಂಡೂರು ತಹಶೀಲ್ದಾರ್, ಭೈರತಿ ಬಸವರಾಜ್ ಪ್ರಕರಣಗಳ ಬಗ್ಗೆ ವೃಥಾ ಚರ್ಚೆ ನಡೆಸಿದ್ದಾರೆ. ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತೋ ಅದಕ್ಕೆ ಪ್ರಾರಂಭಿಕ ಹಂತದಲ್ಲಿ ನೀಡಿಲ್ಲ. ಕೊನೆಯ ಎರಡು ದಿನವೆಂದು ಆಗ ಕೂಡ ಸರಿಯಾದ ಚರ್ಚೆ ನಡೆಯಲಿಲ್ಲ.

Loss to Kannadigas From Karnataka Bandh, Not to Maharashtra Says HD Kumaraswamy

ಸರ್ಕಾರದವರು ಕೊನೆಯಲ್ಲಿ ಮತಾಂತರ ವಿಚಾರ ತಂದರು. ಸದನದ ಕಲಾಪ ನಡೆಯಬೇಕೆಂಬ ಆಶಯ ಈಡೇರಲಿಲ್ಲ. ಕೆಲವರು ಈ ನಿಟ್ಟಿನಲ್ಲಿ ಯೋಚಿಸುತ್ತಾರೆ. ಆದರೆ ಅವರ ಆಶಯ ಈಡೇರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Recommended Video

Sports Flashback 2021 Episode 03 | Top 5 best moments | Oneindia Kannada

English summary
The MES Organization which was involved in the Violence incident in Belagavi should be banned by legal action, Former Chief Minister HD Kumaraswamy Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X