ಕುಲದಲ್ಲಿ ಕೀಳಾವುದೋ ಹುಚ್ಚಪ್ಪ" ಹಾಡಿಗೆ ಮಾಗಡಿ ಶಾಸಕ ಭರ್ಜರಿ ಡ್ಯಾನ್ಸ್
ರಾಮನಗರ, ಅಕ್ಟೋಬರ್, 13: ಬಿಡದಿಯಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಗಡಿ ಶಾಸಕ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಕೂಲಿಂಗ್ ಕ್ಲಾಸ್, ಪೇಟ ತೊಟ್ಟು ಪೌರಕಾರ್ಮಿಕರ ಜೊತೆ "ಕುಲದಲ್ಲಿ ಕೀಳಾವುದೋ ಹುಚ್ಚಪ್ಪ, ಮತದಲ್ಲಿ ಮೇಲಾವುದೋ" ಹಾಡಿಗೆ ಸಕ್ಕತ್ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿನ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಕುಣಿದು ಕುಪ್ಪಳಿಸುತ್ತಿದ್ದಂತೆ, ಕಾರ್ಯಕರ್ತರ ಶಾಸಕರ ಮಸ್ತ್ ಡ್ಯಾನ್ಸ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದರು.

ನಾಗಮಂಗಲದಲ್ಲಿ ಸದ್ದು ಮಾಡಿದ ನಂಗಾನಾಚ್ ನೃತ್ಯ
ವಿಧಾನಸಭಾ ಚುನಾವಣೆಗೂ ಮುನ್ನ ನಾಗಮಂಗಲ ತಾಲೂಕಿನಲ್ಲಿ ನಂಗಾನಾಚ್ ನೃತ್ಯ ಮರುಕಳಿಸಿತ್ತು. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಟಿ.ಚನ್ನಾಪುರ ಗ್ರಾಮದಲ್ಲಿ ಗ್ರಾಮದೇವತೆ ಮಂಚಮ್ಮದೇವಿ ಮತ್ತು ಮಸಣಕಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ರಾತ್ರಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮವೊಂದರಲ್ಲಿ ತುಂಡುಡುಗೆ ನೃತ್ಯ ಪ್ರದರ್ಶನಗೊಂಡಿತ್ತು. ರಸಮಂಜರಿ ಕಾರ್ಯಕ್ರಮದ ಮಧ್ಯೆ ಸುರೇಶ್‌ಗೌಡ ಸೇರಿದಂತೆ ತಾಲೂಕಿನ ಜೆಡಿಎಸ್ ಪಕ್ಷದ ಹಲವು ಮುಖಂಡರು ವೇದಿಕೆ ಕಾರ್ಯಕ್ರಮ ಮುಗಿಸಿ ಹೋಗಿದ್ದರು.
ಆಗ ಮತದಾರರನ್ನು ಸೆಳೆಯಲು ಸುರೇಶ್‌ಗೌಡ ಅಧ್ಯಕ್ಷತೆಯಲ್ಲಿ ಅವರ ಬೆಂಬಲಿಗರು ಗ್ರಾಮದೇವತೆ ಜಾತ್ರಾ ಮಹೋತ್ಸವದ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ಆಯೋಜಿಸಿ ಡ್ಯಾನ್ಸರ್‌ಗಳನ್ನು ಕರೆಸಿ ರವಿಚಂದ್ರನ್ ನಟಿಸಿರುವ ಪ್ರೀತ್ಸೋದ್ ತಪ್ಪಾ ಚಿತ್ರದ ರಾಜಾ ರಾಜಾ ಹಾಡಿಗೆ ಅರೆಬೆತ್ತಲೆ ನೃತ್ಯ ಮಾಡಿಸಿದ್ದರು.
ತುಂಡುಡುಗೆ ತೊಟ್ಟಿದ್ದ ನೃತ್ಯಗಾರ್ತಿಯೊಬ್ಬಳು ಗ್ರಾಮದ ಬಾಲಕನೊಬ್ಬನನ್ನು ವೇದಿಕೆ ಮೇಲೆ ಎಳೆತಂದು ಕೂರಿಸಿ ಮೈಗೆಸುತ್ತಿಕೊಂಡಿದ್ದ ಟವೆಲ್ ಬಿಚ್ಚೆಸೆದು ವೇದಿಕೆಯಲ್ಲಿಯೇ ಅಸಭ್ಯವಾಗಿ ನೃತ್ಯ ಮಾಡಿದ್ದಲ್ಲದೆ, ಆ ಬಾಲಕನನ್ನು ಎತ್ತಿಕೊಂಡು ಮುತ್ತಿಟ್ಟು ಮುದ್ದಾಡಿದ ನಂತರ ಬಾಲಕನ ಮೇಲೆ ಮಲಗಿ ಚುಂಬಿಸುವ ಮೂಲಕ ಪಡ್ಡೆ ಹುಡುಗರ ಶಿಳ್ಳೆ ಗಿಟ್ಟಿಸಿಕೊಂಡಿದ್ದಳು. ಆದರೆ ಈ ಅಸಭ್ಯ ನೃತ್ಯ ನೆರೆದಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮುಜುಗರ ಉಂಟುಮಾಡಿತ್ತು.
ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಗ್ರಾಮದೇವತೆಗಳ ಹಬ್ಬ ಆಚರಣೆಗಳು ನಮ್ಮ ಪೂರ್ವಿಕರು ನಡೆಸಿಕೊಂಡು ಬಂದಿರುವ ಸಂಪ್ರದಾಯ. ಆದರೆ ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ಮುಂಬೈ ಸೇರಿದಂತೆ ನೆರೆಯ ತೆಲಂಗಾಣ, ಆಂದ್ರಪ್ರದೇಶ ಹಾಗೂ ಉತ್ತರ ಭಾರತದಲ್ಲಿ ನಡೆಸುತ್ತಿರುವ ನಂಗಾನಾಚ್ ನೃತ್ಯ ಪ್ರದರ್ಶನಗಳು ತಾಲೂಕಿಗೆ ಪ್ರವೇಶಿಸಿರುವುದು ಜಿಲ್ಲೆ ಹಾಗೂ ತಾಲೂಕಿಗೆ ಕಳಂಕ ತರುತ್ತಿದ್ದು, ಇಂತಹ ಅಸಭ್ಯ ನೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಗ್ರಾಮದ ಹಿರಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.
ತಡರಾತ್ರಿವೆರಗೂ ನಡೆದ ರಸಮಂಜರಿ ಕಾರ್ಯಕ್ರಮದ ಕೆಲ ಅಸಭ್ಯ ನೃತ್ಯಗಳ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications