ರಾಮನಗರ : ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಎ.ಮಂಜು ರಾಜೀನಾಮೆ

ರಾಮನಗರ, ಮಾರ್ಚ್ 29 : ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಎ.ಮಂಜು ರಾಜೀನಾಮೆ ನೀಡಿದ್ದಾರೆ. 2018ರ ವಿಧಾನಸಭೆ ಚುನಾವಣೆಗೆ ಅವರು ಮಾಗಡಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ರಾಮನಗರದ ಜಿಲ್ಲಾ ಪಂಚಾಯಿತಿ ಭವನದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ಅವರನ್ನು ಭೇಟಿ ಮಾಡಿದ ಎ.ಮಂಜು, ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದಿಂದ ಕುದೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಎ.ಮಂಜು ಅವರು, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ್ದರು. ಈ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Magadi Zilla Panchayat member A Manju resigned

ಜೆಡಿಎಸ್ ಪಕ್ಷ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಗಡಿ ಕ್ಷೇತ್ರಕ್ಕೆ ಎ.ಮಂಜು ಅವರು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಎಚ್.ಸಿ.ಬಾಲಕೃಷ್ಣ ಅವರು ಮಾಗಡಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಅವರು ಪಕ್ಷದಿಂದ ಅಮಾನತುಗೊಂಮಡಿದ್ದರು. ಬಳಿಕ ಕೈ ಪಾಳಯಕ್ಕೆ ಜಿಗಿದಿದ್ದಾರೆ.

ಇದಕ್ಕೆ ತಿರುಗೇಟು ನೀಡುವಂತೆ ಕಾಂಗ್ರೆಸ್ ನ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಾಲಕೃಷ್ಣ ವಿರುದ್ಧ ಮಂಜು ಅವರು ಕಣಕ್ಕಿಳಿಯಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+