ಉತ್ತರ ಕರ್ನಾಟಕ ಬಂದ್ ಗೆ ರಾಮನಗರದಲ್ಲಿ ಬೆಂಬಲ

Posted By: ರಾಮನಗರ ಪ್ರತಿನಿಧಿ
Subscribe to Oneindia Kannada

ರಾಮನಗರ, ಡಿಸೆಂಬರ್ 27:ಮಹದಾಯಿ ವಿವಾದ ವಿಚಾರವಾಗಿ ಉತ್ತರ ಕರ್ನಾಟಕ ಬಂದ್ ಆಚರಣೆ ಹಿನ್ನೆಲೆಯಲ್ಲಿ ಉತ್ತರದ ಕನ್ನಡಿಗರಿಗಾಗಿ ದಕ್ಷಿಣದಲ್ಲಿ ಸ್ಪಂದನೆ ಸಿಕ್ಕಿದೆ.

ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಚೆ ಕಚೇರಿ ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Mahadayi Row ː Ramanagara district Channapatna's Kannada activists supported North Karnataka Bandh

ಮಹಾದಾಯಿ ವಿಚಾರದಲ್ಲಿ ರಾಜ್ಯದ ಹಿತ ಕಾಯದ ಬಿಜೆಪಿ, ಕೇಂದ್ರ ಸರ್ಕಾರ ಹಾಗೂ ಗೋವಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಶೀಘ್ರವೇ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿದರು. ಅಲ್ಲದೆ ಕೇಂದ್ರ ಬಿಜೆಪಿ ಸರ್ಕಾರ ಕನ್ನಡ ವಿರೋಧಿ ಸರ್ಕಾರ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ರಾಜ್ಯದ ಬಿಜೆಪಿ ಸಂಸದರ ವಿರುದ್ಧ ಕೊಡ ತಮ್ಮ ಸಿಟ್ಟು ಪ್ರದರ್ಶಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mahadayi Row ː Ramanagara district Channapatna's Kannada activists supported North Karnataka Bandh

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ