ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಕ್ಕಳಲ್ಲಿ ಸಾಮೂಹಿಕ ಚರ್ಮ ಸಮಸ್ಯೆ; ಹಾಸ್ಟೆಲ್ ವಾರ್ಡನ್ ಅಮಾನತಿಗೆ ಆದೇಶ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 3: ಸ್ವಚ್ಛತೆ ಕೊರತೆಯಿಂದಾಗಿ ಮಕ್ಕಳಲ್ಲಿ ಸಾಮೂಹಿಕವಾಗಿ ಚರ್ಮ ಸಮಸ್ಯೆ ಕಾಣಿಸಿಕೊಂಡು ಈಚೆಗೆ ಸುದ್ದಿಯಾಗಿದ್ದ ರಾಮನಗರದ ಕೈಲಾಂಚ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್ ಅನ್ನು ಅಮಾನತುಗೊಳಿಸಲಾಗಿದೆ.

ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ಚರ್ಮರೋಗ ತಗುಲಿದ್ದು, ವಸತಿ ಶಾಲೆಯಲ್ಲಿನ ಅಶುದ್ಧತೆಯೇ ಇದಕ್ಕೆ ಕಾರಣ ಎನ್ನಲಾಗಿತ್ತು. ಈ ಹಾಸ್ಟೆಲ್ ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದರು. ಎಲ್ಲ ವ್ಯವಸ್ಥೆ ನೀಡುವ ಭರವಸೆಯನ್ನೂ ನೀಡಿದ್ದರು.

ವಸತಿ ಶಾಲೆಯಲ್ಲಿ ವಾರಕ್ಕೊಮ್ಮೆ ನೀರು; ಮಕ್ಕಳಿಗೆ ವ್ಯಾಪಿಸಿದೆ ಅಂಟು ರೋಗವಸತಿ ಶಾಲೆಯಲ್ಲಿ ವಾರಕ್ಕೊಮ್ಮೆ ನೀರು; ಮಕ್ಕಳಿಗೆ ವ್ಯಾಪಿಸಿದೆ ಅಂಟು ರೋಗ

ಈ ವಿದ್ಯಮಾನಗಳಿಗೆ ಹಾಸ್ಟೆಲ್ ವಾರ್ಡನ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅವರ ಕರ್ತವ್ಯ. ಆದರೆ ಆ ಕರ್ತವ್ಯಕ್ಕೆ ಲೋಪ ಎಸಗಲಾಗಿದೆ ಎಂದು ಹಾಸ್ಟೆಲ್ ವಾರ್ಡನ್ ಅಮಾನತ್ತಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಆದೇಶಿಸಿದ್ದಾರೆ.

Mass Skin Problem In Hostel Children Warden Suspension

ಸ್ವಚ್ಛತೆ ಇಲ್ಲದೇ ವಸತಿ ಶಾಲೆ ಮಕ್ಕಳಲ್ಲಿ ಹಬ್ಬಿದ ಚರ್ಮ ರೋಗ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆಸ್ವಚ್ಛತೆ ಇಲ್ಲದೇ ವಸತಿ ಶಾಲೆ ಮಕ್ಕಳಲ್ಲಿ ಹಬ್ಬಿದ ಚರ್ಮ ರೋಗ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

"ಅಧಿಕಾರಿಗಳ ನಿರ್ಲ್ಯಕ್ಷದಿಂದಾಗಿ ಮಕ್ಕಳಿಗೆ ಚರ್ಮ ರೋಗ ಬಂದಿದೆ. ಬಡ ಮಕ್ಕಳಿಗೆ ಎಲ್ಲ ಸೌಲಭ್ಯ ನೀಡಬೇಕೆಂಬುದು ಸರ್ಕಾರದ ಆಶಯ. ಆದರೆ ಅಧಿಕಾರಿಗಳು ಈ ಆಶಯಕ್ಕೆ ಧಕ್ಕೆ ತರುತ್ತಿದ್ದಾರೆ. ಒಬ್ಬ ಅಧಿಕಾರಿಗೆ ಬಿಸಿ‌ ಮುಟ್ಟಿಸಿದರೆ ಇನ್ನುಳಿದ ಅಧಿಕಾರಿಗಳಿಗೆ ಬುದ್ಧಿ ಬರುತ್ತದೆ" ಎಂದು ಹೇಳಿ ಅಮಾನತುಗೊಳಿಸಲು ಆದೇಶಿಸಿದ್ದಾರೆ.

English summary
A hostel warden in Dr B.R.Ambedkar residential school of Kailancha village in Ramanagara, has been suspended because of the neglegence towards hostel students who suffered mass skin problem.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X