ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರದ ನಿರ್ಬಂಧ ನಡುವೆಯೂ ಮೇಕೆದಾಟು ಪಾದಯಾತ್ರೆ ಮುಂದುವರೆಸುತ್ತೇವೆ; ಡಿ.ಕೆ. ಸುರೇಶ್

|
Google Oneindia Kannada News

ರಾಮನಗರ, ಜನವರಿ 13: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಮುಂದುವರೆಸುತ್ತದೆ, ಜನರಿಗಾಗಿ ಕೈಗೊಂಡಿರುವ ಆಂದೋಲನವನ್ನು ನಿಲ್ಲಿಸುವುದು ಸರ್ಕಾರದ ಕಡೆಯಿಂದ ಸರಿಯಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮೇಕೆದಾಟು ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇರೆಗೆ ಹೈಕೋರ್ಟ್ ವಿಚಾರಣೆ ನಡೆಸಿ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿತ್ತು.

ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಬುಧವಾರ ರಾತ್ರಿ ಮೇಕೆದಾಟು ಪಾದಯಾತ್ರೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ನಡುವೆಯೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Mekedatu Padayatra: Congress Will Continue the March Despite Govt Order Says Congress MP DK Suresh

ರಾಮನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಗುರುವಾರ ಸಂಭಾವ್ಯ ಬಿಕ್ಕಟ್ಟು ನಿರೀಕ್ಷಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ಹಿನ್ನೆಲೆ ರಾಮನಗರದ ಐಜೂರು ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚು ಜನ ಸೇರಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.

Mekedatu Padayatra: Congress Will Continue the March Despite Govt Order Says Congress MP DK Suresh

ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚು ಜನರು ಸೇರದಂತೆ ಮೈಕ್‌ನಲ್ಲಿ ಅನೌನ್ಸ್ ಮಾಡಲಾಗಿದೆ.

ರಾಮನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಐಜೂರು ವೃತ್ತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚರಿಸಲು ಪೊಲೀಸರಿಂದ ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಜನರು ಗುಂಪುಗೂಡಿದ್ದು, ಜನರ ಗುಂಪು ತೆರವುಗೊಳಿಸಲು ಟ್ರಾಫಿಕ್ ಪೊಲೀಸರು ಹರಸಾಹಸಪಟ್ಟರು.

ಕಾಂಗ್ರೆಸ್ ನಾಯಕರ ಪಾದಯಾತ್ರೆ ತಡೆಗಟ್ಟಲು ರಾಮನಗರ ಐಜೂರು ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಅಗತ್ಯ ಬಿದ್ದರೆ ಜಲ ಫಿರಂಗಿ ಬಳಸಿ ಪಾದಯಾತ್ರೆ ತಡೆಯಲು ಪೋಲಿಸರು ಸಿದ್ಧವಾಗಿದ್ದಾರೆ.

Recommended Video

ಕೇಪ್ ಟೌನ್ ಟೆಸ್ಟ್ ನಲ್ಲಿ ವಿಶಿಷ್ಟ ಶತಕ ಸಿಡಿಸಿದ Virat Kohli | Oneindia Kannada

English summary
Congress will continue the Mekedatu Padaytra despite Karnataka govt order says congress MP DK Suresh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X