ಸೋಮವಾರ ಸಿಎಂ ರಾಮನಗರ ಪ್ರವಾಸ; ಮೇಕೆದಾಟು ಯೋಜನೆ ಬಗ್ಗೆ ಮಹತ್ವದ ಘೋಷಣೆ

ರಾಮನಗರ, ಜನವರಿ 02; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾಮನಗರಕ್ಕೆ ಭೇಟಿ ನೀಡುತ್ತಿದ್ದಾರೆ. ನಾನಾ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ ಮುಖ್ಯಮಂತ್ರಿಗಳು ಮೇಕೆದಾಟು ಯೋಜನೆ ಬಗ್ಗೆ ಸೋಮವಾರ ಮಹತ್ವದ ಹೇಳಿಕೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ‌ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಭಾನುವಾರ ಸಚಿವರು ಕಾರ್ಯಕ್ರಮಗಳ ಪೂರ್ವ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, "ಸೋಮವಾರ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತವು ಸಿದ್ಧತೆಗಳನ್ನು ಮಾಡಿಕೊಂಡಿದೆ" ಎಂದರು.

ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗಳನ್ನು ಮುಖ್ಯಮಂತ್ರಿ ಅನಾವರಣಗೊಳಿಸಲಿದ್ದಾರೆ. ಬಳಿಕ ನಗರಾಭಿವೃದ್ಧಿ ಇಲಾಖೆ ಹಲವು ಗ್ರಾಮಗಳಿಗೆ ನದಿ ಮೂಲದ ನೀರು ಪೂರೈಸುವ ನಳ ಸಂಪರ್ಕ ವ್ಯವಸ್ಥೆ, ಪ್ರಾಧಿಕಾರದ ಕಟ್ಟಡದ ಮೇಲ್ಚಾವಣಿಯಲ್ಲಿ ಸೌರಶಕ್ತಿ ಫಲಕ, ಕಂದಾಯ ಭವನದ ಕೋವಿಡ್ ರೆಫರಲ್ ಆಸ್ಪತ್ರೆ, ಕನಕಪುರ ಸಾರ್ವಜನಿಕ ಆಸ್ಪತ್ರೆಯ ಆಮ್ಲಜನಕ ಘಟಕ, ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ 5 ಅಂಗನವಾಡಿ ಮತ್ತು 6 ಪಶು ಆಸ್ಪತ್ರೆಗಳು, ಚನ್ನಪಟ್ಟಣ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿಸಿರುವ ಹೆಚ್ಚುವರಿ ಕೊಠಡಿಗಳು, ಮಾಕಳಿ ಮತ್ತು ಚಕ್ಕೆರೆಗಳಲ್ಲಿ ನಿರ್ಮಿಸಿರುವ ಸರಕಾರಿ ಪದವಿಪೂರ್ವ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ.

Basavaraj Bommai

ಇದೇ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಬಿಡದಿ ಪಟ್ಟಣದ ಒಳಚರಂಡಿ ಕಾಮಗಾರಿ, 1,100ಕ್ಕೂ ಹೆಚ್ಚು ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ನಲ್ಲಿ ಸಂಪರ್ಕ, ರಾಮನಗರದ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯ 2 ಮತ್ತು 3ನೇ ಮಹಡಿ, ಅರ್ಚಕರಹಳ್ಳಿಯಲ್ಲಿ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಹಾಸ್ಟೆಲ್ ನಿರ್ಮಾಣ ಮತ್ತು ರಾಮನಗರದಲ್ಲಿ ತಲೆಯೆತ್ತಲಿರುವ ಸರಕಾರಿ ಯುನಾನಿ ಕಾಲೇಜು ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಮಾಗಡಿಯಲ್ಲೂ ಅಭಿವೃದ್ಧಿ ಪರ್ವ; ರಾಮನಗರದ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಮತ್ತು ಸಚಿವರು ಮಾಗಡಿ ತಾಲ್ಲೂಕಿನಲ್ಲಿರುವ ಚಿಕ್ಕಕಲ್ಯ ಗ್ರಾಮಕ್ಕೆ ತೆರಳಲಿದ್ದು, ಅಲ್ಲಿ ಅತ್ಯಾಧುನಿಕ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ. ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ 100 ಎಕರೆ ವಿಸ್ತಾರದಲ್ಲಿ ತಲೆಯೆತ್ತಲಿರುವ ಕರ್ನಾಟಕ ರಾಜ್ಯ ಸಂಸ್ಕೃತ ವಿವಿ ಕ್ಯಾಂಪಸ್, ಕರ್ನಾಟಕ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ನಿರ್ಮಾಣ, ಅಜ್ಜನಹಳ್ಳಿಯಲ್ಲಿ ಮೆಟ್ರಿಕ್-ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿರ್ಮಾಣ, ಮಾಗಡಿ ಪಟ್ಟಣದಲ್ಲಿ ಮೆಟ್ರಿಕ್ ನಂತರದ ಬಾಲಕದ ಹಾಸ್ಟೆಲ್ ಮತ್ತು ನೂತನ ಗ್ರಂಥಾಲಯ ಕಟ್ಟಡ, ಕುದೂರಿನಲ್ಲಿ ತಲೆಯೆತ್ತಲಿರುವ ಮೆಟ್ರಿಕ್-ಪೂರ್ವ ಬಾಲಕಿಯರ ಹಾಸ್ಟೆಲ್, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹ ಕಾಮಗಾರಿ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಟ್ಟಡ, ಉಕ್ಕಡ ಮತ್ತು ಕರಿಯನ ಪಾಳ್ಯ ಗ್ರಾಮಗಳಿಗೆ ಶುದ್ಧ ನೀರು ಪೂರೈಕೆ ಮಾಡುವ ನಲ್ಲಿ ಸಂಪರ್ಕ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಈಗಾಗಲೇ ನಿರ್ಮಾಣವಾಗಿರುವ ಬೆಸ್ಕಾಂ ವಿಭಾಗೀಯ ಕಚೇರಿ, 10 ಕಿ. ಮೀ. ರಸ್ತೆ ಮತ್ತು 5 ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ. ಕೆಂಪಾಪುರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳು ಕೆಂಪೇಗೌಡರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ಮೇಕೆದಾಟು ಪಾದಯಾತ್ರೆ ಕೈ ಬಿಡಲು ಮನವಿ; ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಸರ್ಕಾರ ಬದ್ಧವಾಗಿದೆ ಹಾಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯನ್ನು ಕೈಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ್ ಮನವಿ ಮಾಡಿದರು.

ashwath narayana

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ನಮ್ಮ ಮುಖ್ಯಮಂತ್ರಿಗಳು ಮೇಕೆದಾಟು ಯೋಜನೆ ಮಾಡುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೇ ಈ ವಿಷಯವನ್ನು ಸದನದಲ್ಲೂ ಸ್ಪಷ್ಟಪಡಿಸಿದ್ದಾರೆ. ಇದೇ ಅದೇ ದಿಕ್ಕಿನಲ್ಲೂ ಕೂಡ ಕೆಲಸ ಮಾಡುತ್ತಿದ್ದೇವೆ. ಸೋಮವಾರದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮಹತ್ವದ ಹೇಳಿಕೆ ನೀಡಲಿದ್ದಾರೆ" ಎಂದರು.

"‌‌ಯೋಜನೆಗೆ ಅಡ್ಡಿಯಾಗಿದ್ದ ಎನ್‌ಜಿಟಿಸ್ ತೆರವು ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆ ಕಾರ್ಯ ರೂಪಕ್ಕೆ ತರುವ ವಿಶ್ವಾಸ ನಮಗಿದೆ. ರಾಮನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗೆ ನೀರಿನ ಬವಣೆ ನೀಗಲಿದೆ. ಸೋಮವಾರ ಸಿಎಂ ಕೂಡ ಈ ಯೋಜನೆ ಬಗ್ಗೆ ಸ್ಪಷ್ಟವಾಗಿ ಹೇಳುತ್ತಾರೆ" ಎನ್ನುವ ಮೂಲಕ ಮಹತ್ವದ ಘೋಷಣೆ ಸುಳಿವು ಕೊಟ್ಟರು.

"ಸರ್ಕಾರ ಯೋಜನೆ ಬಗ್ಗೆ ಗಮನ ಹರಿಸಿದಿದ್ದಾಗ ಮಾತ್ರ ಪಾದಯಾತ್ರೆ ಅವಶ್ಯಕ. ಆದರೆ ನಮ್ಮ‌ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್, ಓಮಿಕ್ರಾನ್ ಸವಾಲಿನ ಪರಿಸ್ಥಿತಿಯಲ್ಲಿ ಇಂತಹ ಕಾರ್ಯಕ್ರಮ ನಡೆಸುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದರು.

ದಲಿತ ಸಂಘಟನೆಗಳ ವಿರೋಧ; ಬಸವರಾಜ ಬೊಮ್ಮಯಿ ಅವರಿಂದ ಅಂಬೇಡ್ಕರ್, ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಒಕ್ಕಲಿಗ ಮತ್ತು ದಲಿತ ಮುಖಂಡರನ್ನು ಕತ್ತಲಿನಲ್ಲಿಡಲಾಗಿದೆ ಎಂದು ಆರೋಪಿಸಲಾಗಿದೆ.

ಜಿಲ್ಲಾಡಳಿತ ಅಂಬೇಡ್ಕರ್ ಹಾಗೂ ಕೆಂಪೇಗೌಡರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲೆಯ ದಲಿತ ಸಮುದಾಯಕ್ಕೆ ಆಹ್ವಾನ ನೀಡಿಲ್ಲ, ಅಲ್ಲದೇ ಒಕ್ಕಲಿಗ ಮುಖಂಡರನ್ನು ಗಣನೆಗೆ ತೆಗೆದುಕೊಂಡಿಲ್ಲ. ಸೌಜನ್ಯಕ್ಕೆ ಸಭೆ ಕರೆದು ಚರ್ಚೆ ಮಾಡಿಲ್ಲ. ಕಾಟಚಾರಕ್ಕೆ ಪೋನ್ ಮೂಲಕ ಕಾರ್ಯಕ್ರಮ ಅಹ್ವಾನ ನೀಡಿದ್ದಾರೆ ಎಂದು ದಲಿತ ಮುಖಂಡರು ಆರೋಪ ಮಾಡಿದ್ದಾರೆ.

ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡುವಾಗ ಪುರೋಹಿತರಿಂದ ಯಾವುದೇ ಹೋಮ - ಹವನ ಮಾಡಿಸಬಾರದು. ಅಂಬೇಡ್ಕರ್ ಬೌದ್ಧ ಧರ್ಮದ ಅನುಯಾಯಿಗಳಾಗಿದ್ದರು ಹಾಗಾಗಿ ಪುರೋಹಿತರು ಬೇಕಾಗಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+