ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

73064 ಕೊಠಡಿಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ: ಸುರೇಶ್ ಕುಮಾರ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜುಲೈ 18: ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುವುದು.ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪರೀಕ್ಷೆಯ ನಂತರ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಬಾರಿ 3310 ಇದ್ದ ಪರೀಕ್ಷಾ ಕೇಂದ್ರಗಳನ್ನು 4885 ಹಾಗೂ 48000 ಪರೀಕ್ಷಾ ಕೊಠಡಿಗಳನ್ನು 73064 ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಅವರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಳೆದ ಬಾರಿ 6 ದಿನಗಳು 10 ನೇ ತರಗತಿ ಪರೀಕ್ಷೆ ಮಾಡಿದ ಅನುಭವವಿದೆ. ಈ ಬಾರಿ ಕೋವಿಡ್ ಕಾರಣದಿಂದ 2 ದಿನಗಳ ಕಾಲ ಪರೀಕ್ಷೆ ಮಾಡುತ್ತಿರುವುದರಿಂದ ಕಳೆದ ಬಾರಿಗಿಂತ ಉತ್ತಮವಾಗಿ ಈ ಬಾರಿ ಇಲಾಖೆಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ

ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ

ಕೋವಿಡ್ ಪಾಸಿಟೀವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜ್ವರ ಕೆಮ್ಮು ನೆಗಡಿ ಅಂತಹ ಲಕ್ಷಣ ಕಂಡುಬಂದ ವಿದ್ಯಾಥಿ೯ಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾಥಿ೯ ಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

 ಬಿಡದಿಯಲ್ಲಿ ಸುರೇಶ್ ಕುಮಾರ್

ಬಿಡದಿಯಲ್ಲಿ ಸುರೇಶ್ ಕುಮಾರ್

ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಇಂದು ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರ ಪರಿಶೀಲನೆ

ಪರೀಕ್ಷಾ ಕೇಂದ್ರ ಪರಿಶೀಲನೆ

ಪರಿಶೀಲನೆಯ ಸಂದಭ೯ದಲ್ಲಿ ಸಾವ೯ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾಥಿ೯ಗಳಿಗೆ ಗೋಚರವಾಗುವ ರೀತಿ ಪ್ರದಶ೯ನ ವಾಗಬೇಕು. ಈ ಬಾರಿ ಪರೀಕ್ಷೆ ಒ.ಎಮ್.ಆರ್ ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾಥಿ೯ ಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ತಾಕೀತು ಮಾಡಿದರು.

ಮಳೆ ಇರುವ ಹಿನ್ನೆಲೆಯಲ್ಲಿ ವಿದ್ಯಾಥಿ೯ಗಳು ಪರೀಕ್ಷಾ ಕೇಂದ್ರ ಗಳಿಗೆ ಬೇಗ ಆಗಮಿಸಿದರೆ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು.

Recommended Video

CD ಕೇಸ್ ಹಿಂದೆ DKS ಕೈವಾಡ ಇದೆ ಅನ್ನೋದಕ್ಕೆ ಇಷ್ಟು ಸಾಕಲ್ವಾ?? : Ramesh Jarkiholi | Oneindia Kannada
ಪರೀಕ್ಷೆ ಬರೆಯಲು ಡೆಸ್ಕ್

ಪರೀಕ್ಷೆ ಬರೆಯಲು ಡೆಸ್ಕ್

ಪರೀಕ್ಷೆ ಬರೆಯಲು ಡೆಸ್ಕ್ ಉತ್ತಮ ವಾಗಿರಬೇಕು ಈ ಬಗ್ಗೆ ಪರೀಕ್ಷಾ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ತಿಳಿಸಿದರು.

ಮುಂದಿನ ವರ್ಷದ ಶೈಕ್ಷಣಿಕ ಸಾಲು ಆರಂಭಿಸುವ ಬಗ್ಗೆ ಸಾವ೯ಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾಯ೯ಪಡೆ ರಚಿಸಲಾಗಿದ್ದು , ಕಾಯ೯ಪಡೆಯಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾಯ೯ ನಿವ೯ಹಸುತ್ತಿರುವ ಸಂಘ ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಸಭೆ ನಡೆಸಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.

English summary
Education Minister Suresh Kumar inspects SSLC exam center in Ramanagara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X