RR ಆಸ್ಪತ್ರೆಗೆ ಆಕ್ಸಿಜನ್ ಪೂರೈಸುವಂತೆ ಕೈ ಮುಗಿದು ಕೇಳಿಕೊಂಡ ಸಂಸದ ಡಿ.ಕೆ ಸುರೇಶ್

ರಾಮನಗರ, ಮೇ 3: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಬಲಿಯಾದ ಬೆನ್ನಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಆಕ್ಸಿಜನ್ ಖಾಲಿಯಾಗಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಸಂಸದ ಡಿ.ಕೆ ಸುರೇಶ್ ಬಹಿರಂಗಪಡಿಸಿದ್ದಾರೆ.

ರಾಮನಗರ ಜಿಲ್ಲೆಯ ಸುಮಾರು 200 ಮಂದಿ‌ ಕೋವಿಡ್ ಸೋಂಕಿತರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಸ್ಪತ್ರೆಯ ಆಕ್ಸಿಜನ್ ದಾಸ್ತಾನು ಇಂದು ಸಂಜೆಗೆ ಖಾಲಿಯಾಗುತ್ತಿದೆ. ಹಾಗಾಗಿ, ಮಾನ್ಯ ಮುಖ್ಯಮಂತ್ರಿಗಳು ತಕ್ಷಣವೇ ರಾಜರಾಜೇಶ್ವರಿ ಆಸ್ಪತ್ರೆಗೆ ಆಕ್ಸಿಜನ್ ಪುರೈಸುವಂತೆ ಮುಖ್ಯಮಂತ್ರಿಗಳಿಗೆ ಸಂಸದ ಡಿ.ಕೆ ಸುರೇಶ್ ಕೈ‌ಮುಗಿದು ಮನವಿ ಮಾಡಿದ್ದಾರೆ.

RR ಆಸ್ಪತ್ರೆಯ ಆಡಳಿತ ಮಂಡಳಿ ಆಕ್ಸಿಜನ್ ಕೊರತೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಹಿತಿ ತಿಳಿಸಿದ್ದಾರೆ. ನಾನು ಕೂಡ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ, ಅರೋಗ್ಯ ಇಲಾಖೆಯ ಕಾರ್ಯದರ್ಶಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ್ದೇನೆ.

 Ramanagaraa: MP DK Suresh Asked CM Yediyurappa To Supply Oxygen To RR Hospital

ತಕ್ಷಣವೇ ರಾಜರಾಜೇಶ್ವರಿ ಅಸ್ಪತ್ರೆಗೆ ಆಕ್ಸಿಜನ್ ಒದಗಿಸಿ. ಚಾಮರಾಜನಗರದಲ್ಲಿ ನಡೆದ ಘಟನೆ ನಮ್ಮ ಜಿಲ್ಲೆಯಲ್ಲಿ ನಡೆಯುವುದು ಬೇಡ ಎಂದು ಮುಖ್ಯಮಂತ್ರಿಗಳಲ್ಲಿ ಸಂದದ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+