ರಾಮನಗರ: ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಡಿ.ಕೆ ಸುರೇಶ್
ರಾಮನಗರ, ಜುಲೈ 13: ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಿರುವ ರಾಮನಗರದ ಕಂದಾಯ ಭವನದ ಕೋವಿಡ್19 ರೆಫರಲ್ ಆಸ್ಪತ್ರೆಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
Recommended Video
Rameshwaram - A Spiritual Journey To The Divine Site Of Tamil Nadu | Oneindia Kannada
ಸೋಮವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೋಂದಿಗೆ ಸಭೆ ನಡೆಸಿದ ಸಂಸದ ಡಿ.ಕೆ ಸುರೇಶ್ ನಂತರ ಪಿಪಿಇ ಕಿಟ್ ಧರಿಸಿ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡ್ ಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.

ಇತೀಚಿಗೆ ರಾಮನಗರ ಕೋವಿಡ್-19 ಆಸ್ಪತ್ರೆಯಲ್ಲಿ ಶೌಚಾಲಯ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದೇ ರೋಗಿಗಳು ಸಂಕಷ್ಟ ಪಡುತ್ತಿರುವ ಬಗ್ಗೆ ಅಲ್ಲಿನ ರೋಗಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಜನರ ಗಮನ ಸೆಳೆದ ಹಿನ್ನೆಲೆಯಲ್ಲಿ ಸಂಸದರು ಆಸ್ಪತ್ರೆಗೆ ಭೇಟಿ ನೀಡಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಡಿ.ಕೆ ಸುರೇಶ ಅವರೊಂದಿಗೆ ಶೌಚಾಲಯದ ಸಮಸ್ಯೆ, ಸ್ವಚ್ಛತೆ ಇಲ್ಲದಿರುವುದು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸೋಂಕಿತರು ಸಂಸದರ ಗಮನ ಸೆಳೆದಿದ್ದಾರೆ. ಔಷಧಿ, ಶುಶ್ರೂಷೆ ಹಾಗೂ ಊಟದ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ.












Click it and Unblock the Notifications