ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಾಪ್ ಸಿಂಹ ಏನ್ ದೊಡ್ಡ ಎಂಜಿನಿಯರಾ? ಅವರಿಂದ ಕಲಿಯಬೇಕಾ?: ಕುಮಾರಸ್ವಾಮಿ ವ್ಯಂಗ್ಯ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್‌, 01: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್‌ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿ ಆಗಿದೆ. ಎಕ್ಸ್‌ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

ಚನ್ನಪಟ್ಟಣದಲ್ಲಿ ಇಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಣಸನಹಳ್ಳಿ ಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದರು. ಮೊದಲು ಒತ್ತುವರಿ ಆದ ನಾಲೆ, ಕಾಲುವೆ ತೆರವು ಮಾಡಲಿ ಎಂಬ ಪ್ರತಾಪ್ ಸಿಂಹ ಟ್ವೀಟ್ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳು ಕೂಡ ಬೆಂಗಳೂರು ನಗರದ ವಿವಿಧ ಕಡೆ ಭೇಟಿ ನೀಡಿದ್ದಾರೆ. ಅಲ್ಲಿಯೂ ಸಹ ಮನೆಗಳಲ್ಲಿ ನೀರು ನಿಂತಿದೆ. ಯಾಕೆ ಅನ್ನುವುದನ್ನು ಪ್ರತಾಪ್ ಸಿಂಹ ಅರ್ಥ ಮಾಡಿಕೊಳ್ಳಬೇಕು. ಇದು ಈಗ ಆಗಿರುವ ತೊಂದರೆ ಅಲ್ಲ. ರಾಜಕೀಯ ದುರುದ್ದೇಶದಿಂದ ಆಗಿರುವ ಅನಾಹುತಗಳು ಇವು. ಈ ಹಿಂದಿನ ಸರ್ಕಾರಗಳಲ್ಲಿ ತಪ್ಪು ತೀರ್ಮಾನಗಳು ಆಗಿವೆ. ಹೆಚ್‌.ಡಿ.ಕುಮಾರಸ್ವಾಮಿ ಮಾಡಿರುವ ನಿರ್ಧಾರಗಳಲ್ಲ ಇವು ಎಂದು ಟೀಕಾ ಪ್ರಹಾರ ನಡೆಸಿದರು.

ರಾಮನಗರ ನಂತರ ಕನಕಪುರದಲ್ಲೂ ರೌದ್ರತೆ ಮೆರೆದ ವರುಣರಾಮನಗರ ನಂತರ ಕನಕಪುರದಲ್ಲೂ ರೌದ್ರತೆ ಮೆರೆದ ವರುಣ

 'ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರಾ?'

'ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರಾ?'

"ರಸ್ತೆಗಳಲ್ಲಿ ನೀರು ನಿಂತಿದೆಯಲ್ಲ, ಅದಕ್ಕೆ ಕಾರಣ ಯಾರು? ಅಕ್ರಮವಾಗಿ ನಿರ್ಮಾಣ ಆಗಿರುವುದನ್ನು ನಾವು ತೆರವು ಮಾಡಿಸುತ್ತೇವೆ. ಎಕ್ಸ್‌ಪ್ರೆಸ್ ಹೈವೇ ಕಾಮಗಾರಿ ಪ್ರಾರಂಭ ಆದಮೇಲೆ ಈ ಸಮಸ್ಯೆ ಸೃಷ್ಟಿ ಆಗಿದೆ. ಎಕ್ಸ್‌ಪ್ರೆಸ್ ಹೈವೇ ಕಾಮಗಾರಿ ಉತ್ತಮವಾಗಿದೆ ಎನ್ನಲು ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರ್ ಏನ್ರೀ?," ಎಂದು ಪ್ರಶ್ನಿಸುವುದರ ಮೂಲಕ ಕಿಡಿಕಾರಿದರು.

"ಅದೆಲ್ಲೋ ಬರವಣಿಗೆ ಮಾಡಿಕೊಂಡು ಇದ್ದ ವ್ಯಕ್ತಿ ಪ್ರತಾಪ್ ಸಿಂಹ ಈಗ ನರೇಂದ್ರ ಮೋದಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರಿಂದ ನಾನು ಕಲಿಯಬೇಕಾ? ಅವರು ಸುಖಾ ಸುಮ್ಮನೆ ನನ್ನನ್ನು ಕೆರಳಿಸುವುದು ಬೇಡ. ಹೆದ್ದಾರಿಯಲ್ಲಿ ನೀರು ನಿಂತಿದ್ದು ಒತ್ತುವರಿಯಿಂದನಾ? ಅದು ಆಗಿರುವುದು ಕಳಪೆ ಕಾಮಗಾರಿಯಿಂದ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

 ಪ್ರತಾಪ್‌ ಸಿಂಹ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಪ್ರತಾಪ್‌ ಸಿಂಹ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಎಕ್ಸ್‌ಪ್ರೆಸ್ ಹೈವೇ ಅಂಡರ್‌ಪಾಸ್‌ಗಳಲ್ಲಿ ನೀರು ನಿಂತಿದೆ. ಅದು ಯಾಕೆ ನಿಂತಿದೆ ಎನ್ನುವುದನ್ನು ಎಷ್ಟು ಸಲ ಹೇಳಲಿ. ಸಂಸದ ಪ್ರತಾಪ್ ಸಿಂಹ ಎಷ್ಟು ಕಡೆ ಹೋಗಿದ್ದಾರೆ. ಫೋಟೋ ತೆಗೆಸಿಕೊಳ್ಳಲು ಬಂದಿದ್ದರಲ್ಲ ಈಗ ಎಷ್ಟು ಕಡೆ ಬಂದಿದ್ದಾರೆ? ಇವರ ಹತ್ತಿರ ನಾನು ರಾಜಕೀಯ ಕಲಿಯಬೇಕಿಲ್ಲ. ಜನರ ಬದುಕೇನು ಎಂದು ಈತನಿಂದ ಕಲಿಯಬೇಕಿಲ್ಲ. ಜನರ ಕಷ್ಟ ಸುಖಾ ನೋಡಿ ರಾಜಕೀಯ ಮಾಡಿದ್ದರೆ ವಸ್ತುಸ್ಥಿತಿ ಏನೆಂದು ಗೊತ್ತಾಗುತ್ತಿತ್ತು. ಕೇವಲ ಬಿಜೆಪಿ, ಮೋದಿ ಹೆಸರಿನಲ್ಲಿ ರಾಜಕೀಯ ಮಾಡಿ ಎಂಪಿ ಆಗಿದ್ದಾರೆ. ಕಷ್ಟಪಟ್ಟು ಎಂಪಿ ಸ್ಥಾನ ಪಡೆದಿಲ್ಲ ಎಂದು ಅವರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 ಅವೈಜ್ಞಾನಿಕ ಕಾಮಗಾರಿಗೆ ಹೆಚ್‌ಡಿಕೆ ಆಕ್ರೋಶ

ಅವೈಜ್ಞಾನಿಕ ಕಾಮಗಾರಿಗೆ ಹೆಚ್‌ಡಿಕೆ ಆಕ್ರೋಶ

ಕುಮಾರಸ್ವಾಮಿ ಯಾರಿಗಾದರೂ ದೂರು ನೀಡಲಿ ಎಂಬ ಸಿಎಂ ಬೊಮ್ಮಾಯಿ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ನಾನು ಸಿಎಂ ಬಟ್ಟು ಬೇರೆ ಯಾರಿಗೆ ಹೇಳಲಿ? ನಾನು ನಿತಿನ್‌ ಗಡ್ಕರಿ ಅವರನ್ನು ಸಮಯ ಕೇಳಿದ್ದೇನೆ. ಎಕ್ಸ್‌ಪ್ರೆಸ್ ಹೈವೆಯ ಎಲ್ಲಾ ವಿಡಿಯೋ ಮಾಡಿಸಿದ್ದೇನೆ. ಅದೆಲ್ಲವನ್ನು ಅವರಿಗೆ ತಲುಪಿಸುತ್ತೇನೆ. ನಂತರ ಅವರು ತೀರ್ಮಾನ ಮಾಡಲಿ ಎಂದರು

 ಮೋದಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಮೋದಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮೋದಿ ಯಾಕೆ ಬರುತ್ತಾರೆ? ಯಾವ ಅನುದಾನ ಕೊಡುತ್ತಾರೆ? 2019ರಿಂದ ಕರ್ನಾಟಕದಲ್ಲಿ 35-40 ಸಾವಿರ ಕೋಟಿ ರೂಪಾಯಿ ನಷ್ಟ ಆಗಿದೆ. ಆದರೆ ಎನ್‌ಡಿಆರ್‌ಎಫ್‌ನಿಂದ ಕೇವಲ‌ 3 ಸಾವಿರ ಕೋಟಿ ರೂಪಾಯಿ ಮಾತ್ರ ಕೊಟ್ಟಿದ್ದಾರೆ. ಯಾವ ಪುರುಷಾರ್ಥಕ್ಕೆ ಅವರು ಇಲ್ಲಿಗೆ ಬರುತ್ತಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದರು.

ಈಗ ಚುನಾವಣೆ ಹತ್ತಿತ ಬರುತ್ತಿರುವ ದೃಷ್ಟಿಯಿಂದ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತೆಗೆಯದಿದ್ದರೆ ಪ್ರತಿವರ್ಷ ಇಂತಹ ಸಮಸ್ಯೆಗಳು ಆಗುತ್ತಲೇ ಇರುತ್ತವೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅಪಾಯಕಾರಿ ಆಗಿವೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

English summary
HD Kumaraswamy expressed outrage against Mysuru MP Pratap Simha in Hunsanahalli village. He said Pratap Simha doing politics in name of PM Modi. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X