Nikhil Kumaraswamy: ನಾಮಪತ್ರ ಸಲ್ಲಿಸುವ ಮುನ್ನ ದೇವೇಗೌಡ ಮುಂದೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
ರಾಮನಗರ, ಏಪ್ರಿಲ್ 17: ಸೋಮವಾರ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಮುಂದೆ ಕಣ್ಣೀರಿಟ್ಟ ಘಟನೆ ನಡೆದಿದೆ.

#KarnatakaPollsWithTNIE @JanataDal_S candidate from Ramanagara constituency Nikhil Kumaraswamy seeks blessings from grandfather @H_D_Devegowda before filing nomination papers @XpressBengaluru @ramupatil_TNIE @Cloudnirad pic.twitter.com/8iIFROqFCe
— MG Chetan (@mg_chetan) April 17, 2023
ನಾಮಪತ್ರ ಸಲ್ಲಿಸುವ ಮೊದಲು ಬೆಂಗಳೂರಿನ ಪದ್ಮನಾಭ ನಗರದ ಎಚ್‌ಡಿ ದೇವೇಗೌಡ ಅವರ ಮನೆಗೆ ತೆರಳಿ ಅವರು ಆಶೀರ್ವಾದ ಪಡೆದರು. ನಂತರ ಅಜ್ಜಿ ಎಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಕಾಲಿಗೂ ಬಿದ್ದು ಆಶೀರ್ವಾದ ಪಡೆದರು. ಈ ವೇಳೆ ತಾತಾನಿಂದ ಬಿ ಫಾರಂ ಪಡೆದರು. ಇದಕ್ಕೂ ಮುನ್ನ ತನ್ನ ಪತ್ನಿ ಹಾಗೂ ಮಗನ ಪಕ್ಕದಲ್ಲಿದ್ದ ಅವರು ಭಾವುಕರಾಗಿ ಕಣ್ಣೀರಿಟ್ಟರು.
ಸೋಮವಾರ ಕೂಡ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಾನು ಹುಟ್ಟಿದ್ದು ಹಾಸನ ಆದರೆ ಮಣ್ಣಾಗುವುದು ರಾಮನಗರ ಎಂದು ನಾಮಪತ್ರ ಸಲ್ಲಿಸುವ ಮುನ್ನ ಯಾತ್ರೆಯಲ್ಲಿ ಮಾತನಾಡಿದ್ದರು. ತಮ್ಮ ಮಗನಿಗಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟು ತಾವು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದರು.
ಇತ್ತೀಚೆಗೆ ನಿಖಿಲ್ ಅವರು ಕಳೆದ ಬಾರಿಯ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಮಾಡುವಂತೆ ನನಗೂ ಒತ್ತಡ ಬಂದಿತ್ತು. ಆದರೆ ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ನಮ್ಮ ತಾಯಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ನಂತರದ ದಿನಗಳಲ್ಲಿ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಟಿಕೆಟ್ ಆಕಾಂಕ್ಷಿಗಳಲ್ಲ, ಅವರಿಗೆ ಅದರಲ್ಲಿ ಆಸಕ್ತಿಯೂ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದರು.
ನಿಖಿಲ್ ಅವರು 2019ರಲ್ಲಿ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡಿದ್ದರು. ಆದರೆ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅವರ ವಿರುದ್ದ ಸೋಲು ಕಂಡಿದ್ದರು. ಈಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದ ತಮ್ಮ ತಾಯಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರು.












Click it and Unblock the Notifications