Nikhil Kumaraswamy File Nomination: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ರಾಮನಗರ, ಏಪ್ರಿಲ್ 17: ಸೋಮವಾರ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಅವರು ಅವರ ತಾತಾ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಬಳಿ ಚುನಾವಣೆಗೆ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆದು ಕಣ್ಣೀರಿಟ್ಟಿದ್ದರು.
ಸೋಮವಾರ ನಿಖಿಲ್ ಕುಮಾರಸ್ವಾಮಿ ಅವರು ಅವರು ತಮ್ಮ ಪತ್ನಿ ರೇವತಿ ಹಾಗೂ ಮಗ ಅಲ್ಲದೆ ತಾಯಿ ಅನಿತಾ ಕುಮಾರಸ್ವಾಮಿ, ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಬಳಿಕ ಯಾತ್ರೆಯಲ್ಲಿ ತೆರಳಿದ ನಿಖಿಲ್ ಕುಮಾರಸ್ವಾಮಿ ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪಂಚರತ್ನ ರಥಯಾತ್ರೆಯ ವೇಳೆ ನನ್ನನ್ನು ರಾಮನಗರದ ಅಭ್ಯರ್ಥಿ ಎಂದು ಅನಿತಾ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದರು. ಆಗಿನಿಂದಲೂ ನಿಖಿಲ್ ಅವರು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದರು.
ಸೋಮವಾರ ತಾಯಿಯೊಂದಿಗೆ ಬಂದ ನಿಖಿಲ್ ಕುಮಾರಸ್ವಾಮಿ ಅವರು ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಚೇರಿ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಇತ್ತೀಚೆಗೆ ನಿಖಿಲ್ ಅವರು ಕಳೆದ ಬಾರಿಯ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಮಾಡುವಂತೆ ನನಗೂ ಒತ್ತಡ ಬಂದಿತ್ತು. ಆದರೆ ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ನಮ್ಮ ತಾಯಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ನಂತರದ ದಿನಗಳಲ್ಲಿ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಟಿಕೆಟ್ ಆಕಾಂಕ್ಷಿಗಳಲ್ಲ, ಅವರಿಗೆ ಅದರಲ್ಲಿ ಆಸಕ್ತಿಯೂ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದರು.
ನಿಖಿಲ್ ಅವರು 2019ರಲ್ಲಿ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡಿದ್ದರು. ಆದರೆ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅವರ ವಿರುದ್ದ ಸೋಲು ಕಂಡಿದ್ದರು. ಈಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದ ತಮ್ಮ ತಾಯಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರು.
ಸೋಮವಾರ ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಸಾವಿರಾರು ಕಾರ್ಯಕರ್ತರೊಂದಿಗೆ ಯಾತ್ರೆ ತೆರಳಿ ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರ ಎಂದು ಭಾವುಕವಾಗಿ ಮಾತನಾಡಿದರು.












Click it and Unblock the Notifications