ರಾಮನಗರ: ಸೀತಾರಾಮ ಕಲ್ಯಾಣ ಟೀಸರ್ ಬಿಡುಗಡೆಗೆ ಭವ್ಯ ವೇದಿಕೆ ಸಿದ್ಧ
ರಾಮನಗರ. ಜುಲೈ.31: ರೇಷ್ಮೆ ನಗರಿ ರಾಮನಗರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯದ 'ಸೀತರಾಮ ಕಲ್ಯಾಣ' ಚಿತ್ರದ ಟೀಸರ್ ರಿಲೀಸ್ ಮಾಡಲಾಗುತ್ತಿದೆ.
ರಾಮನಗರದ ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವರ ಕರಗ ಉತ್ಸವದ ಪ್ರಯುಕ್ತ ಸಿಎಂ ಕರ್ಮಭೂಮಿ ರಾಮನಗರದಲ್ಲೇ ತಮ್ಮ ಪುತ್ರನ ನಟನೆಯ ಚಿತ್ರದ ಟೀಸರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
'ಸೀತಾರಾಮ ಕಲ್ಯಾಣ' ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ ಕುಮಾರಸ್ವಾಮಿ
ಈ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಸುಮಾರು 30 ಸಾವಿರ ಆಸನದ ವ್ಯವಸ್ಥೆ ಕೂಡ ಮಾಡಲಾಗಿದೆ. ರಾತ್ರಿ 8 ಗಂಟೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆಗೊಳ್ಳಲಿದೆ.

ಸಿ.ಎಂ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

'ಸೀತಾ ರಾಮ ಕಲ್ಯಾಣ' ಸೆಟ್ ನಲ್ಲಿ ಜೂನಿಯರ್ ರೆಬೆಲ್ ಸ್ಟಾರ್
ಖ್ಯಾತ ಸಂಗೀತ ನಿದೇರ್ಶಕ ಅರ್ಜುನ್ ಜನ್ಯ ಅವರ ತಂಡದಿಂದ ಲೈವ್ ಮ್ಯೂಸಿಕಲ್ ರಸಸಂಜೆ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ. ಕಳೆದ ವರ್ಷ ಕೂಡ ಇದೇ ಚಾಮುಂಡೇಶ್ವರಿ ದೇವರ ಕರಗ ಉತ್ಸವದ ದಿನದಂದು ನಿಖಿಲ್ ಅಭಿನಯದ ಮೊದಲ ಚಿತ್ರ ಜಾಗ್ವಾರ್ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಲಾಗಿತ್ತು.












Click it and Unblock the Notifications