• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರದಿಂದ ಬಂದ ಮುಖ್ಯಮಂತ್ರಿಗಳು; ಒಲಿಯದ ಪೂರ್ಣಾವಧಿ ಆಡಳಿತ

By ರಾಮನಗರ ಪ್ರತಿನಿಧಿ
|

ಈಗಿನ ರಾಮನಗರ ಜಿಲ್ಲೆಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದಿಂದ ಆರಿಸಿದವರು ನಾಲ್ವರು ರಾಜ್ಯದ ಮುಖ್ಯಮಂತ್ರಿ ಗಾದಿಗೆ ಏರಿದ್ದಾರೆ. ಆದರೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ ನಾಲ್ವರಿಂದಲೂ ಅಧಿಕಾರದ ಅವಧಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂಬುದೇ ಇತಿಹಾಸದಲ್ಲಿ ದಾಖಲಾಗುವಂತಿದೆ.

ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ದೋಸ್ತಿ ಸರಕಾರ ಪತನವಾಗಿದೆ. ಅಂದಹಾಗೆ ರಾಮನಗರದಲ್ಲಿ ರಾಜಕೀಯವಾಗಿ ಆಶ್ರಯ ಪಡೆದಿದ್ದ ನಾಲ್ವರು ಪ್ರಭಾವಿ ರಾಜಕಾರಣಿಗಳಿಗೆ ಮುಖ್ಯಮಂತ್ರಿ ಗದ್ದುಗೆ ಅಲಂಕರಿಸುವ ಅದೃಷ್ಟವೇನೊ ಒಲಿಯಿತು. ಆದರೆ ಸಿಕ್ಕ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಪೂರ್ಣಾವಧಿವರೆಗೆ ನಡೆಸುವ ಯೋಗ ಮಾತ್ರ ಲಭಿಸಲಿಲ್ಲ.

Live Updates ಬೆಂಗಳೂರಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ

ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ , ಎಚ್.ಡಿ. ದೇವೇಗೌಡ ಹಾಗೂ ಇದೀಗ ಎಚ್.ಡಿ. ಕುಮಾರಸ್ವಾಮಿ ಯಾರೂ ಅಧಿಕಾರ ಪೂರೈಸಿಲ್ಲ. ಇವರೆಲ್ಲರೂ ಅವರು ಅತಿರಥ-ಮಹಾರಥರಂತೆ ಮೆರೆದವರು. ಸರದಾರರಂತೆ ಆಡಳಿತ ನಡೆಸಿದ ಇವರ್ಯಾರೂ ಅವಧಿ ಪೂರ್ಣಗೊಳಿಸಲು ಸಾಧ್ಯವಾಗಲೇ ಇಲ್ಲ.

ಜನತೆ ಕ್ಷಮೆ ಕೋರಿದ ಸಿಎಂಗೆ ವಿಶ್ವಾಸಮತ ಪರೀಕ್ಷೆಯಲ್ಲಿ ಸೋಲು

ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿ, ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರ ಕೂಡ ಅಧಿಕಾರ ಪೂರ್ಣಗೊಳಿಸಿಲ್ಲ.

ಯಾವ ನಾಯಕನ ಮನವೊಲಿಸಲು ಪ್ರಯತ್ನಿಸಲಿಲ್ಲ

ಯಾವ ನಾಯಕನ ಮನವೊಲಿಸಲು ಪ್ರಯತ್ನಿಸಲಿಲ್ಲ

‌ಘಟಾನುಘಟಿ ನಾಯಕರಿಗೆ ರಾಜಕೀಯ ಆಶ್ರಯ ನೀಡಿದ ಜಿಲ್ಲೆ ರಾಮನಗರ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜಕೀಯವಾಗಿ ಮರು ಹುಟ್ಟು ಸಿಕ್ಕಿದ್ದು ಇಲ್ಲಿಂದಲೇ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಾಲಿಗೆ ರಾಮನಗರವೇ ರಾಜಕೀಯ ಕರ್ಮಭೂಮಿ. ರಾಮಕೃಷ್ಣ ಹೆಗಡೆ ಅವರಿಗೂ ಈ ಜಿಲ್ಲೆ ಆಶ್ರಯ ನೀಡಿತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರದಿಂದಲೇ ಗೆದ್ದು, ಮುಖ್ಯಮಂತ್ರಿ ಗದ್ದುಗೆ ಏರಿದ್ದರು. ರಾಜ್ಯದಲ್ಲಿ ಜನತಾ ಪಕ್ಷದ ಚೊಚ್ಚಲ ಸರಕಾರದ ಚುಕ್ಕಾಣಿ ಹಿಡಿದ ರಾಮಕೃಷ್ಣ ಹೆಗಡೆ ಕನಕಪುರದಿಂದ ಆಯ್ಕೆಯಾಗಿ ಸದನದ ಸದಸ್ಯರಾಗಿದ್ದರು. ಇಡೀ ಕನ್ನಡನಾಡಿಗೆ ಕಳಸ ಪ್ರಾಯವಾಗಿರುವ ವಿಧಾನಸೌಧದ ನಿರ್ಮಾತೃ- ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಕೂಡ ರಾಮನಗರದವರೇ. 1952 ಮತ್ತು 1957ರ ಚುನಾವಣೆಗಳಲ್ಲಿ ರಾಮನಗರ ಕ್ಷೇತ್ರದಿಂದ ಕೆಂಗಲ್ ಆಯ್ಕೆಯಾಗಿದ್ದರು. 1952ರ ಮೊದಲ ವಿಧಾನಸಭೆಯಲ್ಲಿ ಮೈಸೂರು ರಾಜ್ಯದ ಪ್ರಭಾವಿ ನಾಯಕರಾಗಿದ್ದ ಕೆಂಗಲ್ ಅವರಿಗೆ ಮುಖ್ಯಮಂತ್ರಿ ಪದವಿ ಒಲಿದು 4 ವರ್ಷದ 5 ತಿಂಗಳು ಆಡಳಿತ ನಡೆಸಿದ್ದರು. ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿದ್ದ ಸಾಹುಕಾರ್ ಚೆನ್ನಯ್ಯ, ವೀರಣ್ಣಗೌಡ, ಗೌರಿಬಿದನೂರು ನಾಗಣ್ಣಗೌಡ ಸೇರಿದಂತೆ ಅನೇಕರ ವಿಶ್ವಾಸವನ್ನು ಕೆಂಗಲ್ ಹನುಮಂತಯ್ಯ ಕಳೆದುಕೊಂಡಿದ್ದರು. ಆ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರೇ ಕೆಂಗಲ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಹಠವಾದಿಯಾಗಿದ್ದ ಕೆಂಗಲ್ ಹನಮಂತಯ್ಯ ಯಾವ ನಾಯಕನ ಮನವೊಲಿಸುವ ಪ್ರಯತ್ನವನ್ನು ಮಾಡಲಿಲ್ಲ. ಹೀಗಾಗಿ ವಿಶ್ವಾಸ ಮತ ಸಾಬೀತು ಪಡಿಸಲಾಗದೆ ಅಧಿಕಾರ ಕಳೆದುಕೊಂಡರು. ಬಾಕಿ ಉಳಿದಿದ್ದ ನಾಲ್ಕು ತಿಂಗಳ ಅವಧಿಗೆ ಕಡಿದಾಳ್ ಮಂಜಪ್ಪ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರು.

ಹನ್ನೆರಡು ತಿಂಗಳು ಆಡಳಿತ ನಡೆಸಿದ್ದರು ರಾಮಕೃಷ್ಣ ಹೆಗಡೆ

ಹನ್ನೆರಡು ತಿಂಗಳು ಆಡಳಿತ ನಡೆಸಿದ್ದರು ರಾಮಕೃಷ್ಣ ಹೆಗಡೆ

1983ರಲ್ಲಿ ರಾಜ್ಯದಲ್ಲಿ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಸರಕಾರ ಅಸ್ತಿತ್ವಕ್ಕೆ ಬಂದಿತು. ಬಿಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಜನತಾ ಪಕ್ಷದ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ರಾಮಕೃಷ್ಣ ಹೆಗಡೆ ಅವರಿಗೆ ಒಲಿದಿತ್ತು. ಆಗ ಹೆಗಡೆ ಉಭಯ ಸದನಗಳಲ್ಲಿ ಯಾವುದರ ಸದಸ್ಯರಾಗಿಲಿಲ್ಲ. ಆರು ತಿಂಗಳೊಳಗೆ ವಿಧಾನಸಭೆ ಇಲ್ಲವೇ ವಿಧಾನ ಪರಿಷತ್ ಸದಸ್ಯರಾಗಬೇಕಿತ್ತು. ಕನಕಪುರದಿಂದ ಚುನಾಯಿತರಾಗಿದ್ದ ಪಿ.ಜಿ.ಆರ್. ಸಿಂಧ್ಯಾ ತಮ್ಮ ಸ್ಥಾನವನ್ನು ತೆರವು ಮಾಡಿಕೊಟ್ಟರು. ಕನಕಪುರದಲ್ಲಿ ನಡೆದ ಮರು ಚುನಾವಣೆಯಲ್ಲಿ ಬನ್ನಿಮಕೋಡ್ಲು ಲಿಂಗೇಗೌಡ ಎದುರು ರಾಮಕೃಷ್ಣ ಹೆಗಡೆ ಗೆಲುವು ಸಾಧಿಸಿ, ಸದನ ಸದಸ್ಯರಾದರು. ಏಳನೇ ವಿಧಾನಸಭೆಯಲ್ಲಿ ಹೆಗಡೆ ಅವರು ಕೇವಲ ಹನ್ನೆರಡು ತಿಂಗಳು ಮಾತ್ರ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಈ ಅವಧಿಯಲ್ಲಿ ಜನತಾ ಪಕ್ಷದ ಶಾಸಕರೊಂದಿಗಿನ ಸಂಭಾಷಣೆಯುಳ್ಳ ವೀರಪ್ಪ ಮೊಯಿಲಿ ಅವರ ಟೇಪ್ ಹಗರಣ ಭಾರೀ ಸದ್ದು ಮಾಡಿತ್ತು. ಇದು ಸರಕಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಹೆಗಡೆ ಅವರು ಸರಕಾರವನ್ನು ವಿಸರ್ಜಿಸಿ, ಜನಾದೇಶಕ್ಕೆ ಮುಂದಾದರು. 1994ರ ಚುನಾವಣೆಯಲ್ಲಿ ರಾಜ್ಯದಲ್ಲಿ ಜನತಾ ದಳ ಪರ ಅಲೆ ಇತ್ತು. ಆಗ ಪಕ್ಷದ ಚುಕ್ಕಾಣಿ ಹಿಡಿದಿದ್ದ ದೇವೇಗೌಡ ಅವರೇ ಮುಂದಿನ ಮುಖ್ಯಮಂತ್ರಿ ಎನ್ನುವ ಕೂಗು ಎದ್ದಿತ್ತು. ಆ ವೇಳೆ ರಾಮನಗರದಿಂದ ಸ್ಪರ್ಧಿಸುವಂತೆ ಸ್ಥಳೀಯ ಮುಖಂಡರು ದುಂಬಾಲು ಬಿದ್ದರು. ಸ್ವಕ್ಷೇತ್ರ ಹೊಳೆನರಸೀಪುರ ಮತ್ತು ರಾಮನಗರ ಪೈಕಿ ಯಾವುದು ಸೂಕ್ತ ಎನ್ನುವ ಆಯ್ಕೆಯನ್ನು ದೇವೇಗೌಡ ಅವರು ಆಪ್ತ ಜ್ಯೋತಿಷಿಗಳಿಗೆ ಒಪ್ಪಿಸಿದರು.

ವಿಶ್ವಾಸ-ಅವಿಶ್ವಾಸ ಮತ: ರಾಜ್ಯದ ಇತಿಹಾಸದಲ್ಲಿ ಎಷ್ಟೆಷ್ಟು ದಿನ ಚರ್ಚೆ ನಡೆದಿತ್ತು?

ಜ್ಯೋತಿಷ್ಯ ವಾಣಿಯಂತೆ ದೇವೇಗೌಡರು ರಾಮನಗರಕ್ಕೆ

ಜ್ಯೋತಿಷ್ಯ ವಾಣಿಯಂತೆ ದೇವೇಗೌಡರು ರಾಮನಗರಕ್ಕೆ

ರಾಮನಗರದಿಂದ ಗೆದ್ದರೆ ಮುಖ್ಯಮಂತ್ರಿ ಕುರ್ಚಿ ಏರುವುದು ಸಲೀಸು ಎನ್ನುವ ಜ್ಯೋತಿಷ್ಯ ವಾಣಿ ಕಿವಿಗೆ ಬಿದ್ದಿದ್ದೇ ತಡ ದೇವೇಗೌಡ ಚಿತ್ತ ಇತ್ತ ನೆಟ್ಟಿತ್ತು. ಆ ಚುನಾವಣೆಯಲ್ಲಿ ದೇವೇಗೌಡರ ಗೆಲುವು ದೊಡ್ಡ ಅಂತರದ್ದೇನಲ್ಲ. ತಿಣುಕಾಟದಿಂದಲೇ ಗೆದ್ದ ಅವರು, ಅಷ್ಟೇ ಪ್ರಯಾಸಪಟ್ಟು ಮುಖ್ಯಮಂತ್ರಿ ಹುದ್ದೆಗೇರಿ 17 ತಿಂಗಳು ಆಡಳಿತ ನಡೆಸಿ, ಗುರಿ ಈಡೇರಿಸಿಕೊಂಡರು. ಇಷ್ಟು ಮಾತ್ರವಲ್ಲದೆ, ರಾಮನಗರ ಪ್ರತಿನಿಧಿಯಾಗಿದ್ದಾಗಲೇ ಪ್ರಧಾನಮಂತ್ರಿ ಹುದ್ದೆಯೂ ಒಲಿಯಿತು. ಪ್ರಧಾನಿಯಾದ ನಾಲ್ಕು ತಿಂಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಆ ನಂತರ 1999ರ ಚುನಾವಣೆಯಲ್ಲಿ ಸೋತಿದ್ದ ದೇವೇಗೌಡರಿಗೆ 2002ರ ಕನಕಪುರ ಸಂಸತ್ ಕ್ಷೇತ್ರ ಉಪಚುನಾವಣೆ ಗೆಲುವು ರಾಜಕೀಯವಾಗಿ ಮರು ಹುಟ್ಟು ನೀಡಿತು. ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ 1996ರಲ್ಲಿ ಲೋಕಸಭಾ ಚುನಾವಣೆ ಎದುರಾಯಿತು. ಆಗ ಸ್ಥಳೀಯ ಮುಖಂಡರ ಒತ್ತಾಸೆಯ ಮೇರೆಗೆ ಎಚ್.ಡಿ. ಕುಮಾರಸ್ವಾಮಿ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಅವಿಭಜಿತ ಜನತಾದಳ ಅಭ್ಯರ್ಥಿಯಾಗಲು ಮುಂದಾದರು. ಒಲ್ಲದ ಮನಸ್ಸಿನಿಂದಲೇ ದೇವೇಗೌಡರು ಸಮ್ಮತಿಸಿದರು. ಚೊಚ್ಚಲ ಚುನಾವಣೆಯಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ ಕುಮಾರಸ್ವಾಮಿ ಸಂಸತ್ ಪ್ರವೇಶಿಸಿದರು.

ಕುಮಾರಸ್ವಾಮಿಗೆ ಎರಡು ಸಲಕ್ಕೂ ಸಾಧ್ಯವಾಗಲಿಲ್ಲ

ಕುಮಾರಸ್ವಾಮಿಗೆ ಎರಡು ಸಲಕ್ಕೂ ಸಾಧ್ಯವಾಗಲಿಲ್ಲ

ಇದರೊಂದಿಗೆ ಕುಮಾರಸ್ವಾಮಿ ಅವರಿಗೆ ರಾಮನಗರವೇ ರಾಜಕೀಯ ಜನ್ಮಭೂಮಿಯಾಯಿತು. 2004ರಲ್ಲಿ ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಪ್ರವೇಶಿಸಿದರು. ಅತಂತ್ರ ವಿಧಾನಸಭೆ ಎದುರಾದಾಗ ಪ್ರಾರಂಭದಲ್ಲಿ ಕಿಂಗ್ ಮೇಕರ್ ಆಗಿದ್ದ ಅವರು, ಬಳಿಕ ಸ್ವತಃ ಪಟ್ಟಾಭಿಷೇಕ ಮಾಡಿಕೊಂಡರು. 12ನೇ ವಿಧಾನಸಭೆಯಲ್ಲಿ 20 ತಿಂಗಳು ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರ ಪಾಲಿಗೆ ಈ ನೆಲ ಅದೃಷ್ಟ ತಂದುಕೊಟ್ಟಿತು. ಕುಮಾರಸ್ವಾಮಿ ಕೊಟ್ಟ ಮಾತಿನಂತೆ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡದ ಕಾರಣ ಜೆಡಿಎಸ್ - ಬಿಜೆಪಿ ಸರಕಾರ ಪತನಗೊಂಡಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಗೆಲವು ಸಾಧಿಸಿದರು. ಪತ್ನಿ ಅನಿತಾ ಅವರಿಗಾಗಿ ರಾಮನಗರ ಕ್ಷೇತ್ರ ತೊರೆದು, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡರು. ವಿಧಾನಸಭೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಕಾರಣ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ - ಕಾಂಗ್ರೆಸ್ ದೋಸ್ತಿ ಸರಕಾರ ರಚನೆಗೊಂಡಿತು. ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 14 ತಿಂಗಳೊಳಗೆ ಕಾಂಗ್ರೆಸ್- ಜೆಡಿಎಸ್ ಸರಕಾರ ಪತನ ಆಗಿದೆ. ಈ ಸಲವೂ ರಾಮನಗರ ಜಿಲ್ಲೆಯ ಕ್ಷೇತ್ರವೊಂದರಿಂದ ಗೆದ್ದು ಬಂದವರಿಗೆ ಪೂರ್ಣಾವಧಿ ಆಡಳಿತ ನೀಡಲು ಆಗಿಲ್ಲ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
No chief minister from Ramanagara district limit constituency complete full term. Here is the interesting details. JDS- Congress coalition government lost majority.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more