ರಾಮನಗರದಲ್ಲಿ ಇನ್ನೂ ಕೆಲ ದಿನ ಕಾರ್ಖಾನೆಗಳು ತೆರೆಯುವಂತಿಲ್ಲ

ರಾಮನಗರ, ಏಪ್ರಿಲ್ 29: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪ್ರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸ್ಪಷ್ಟಪಡಿಸಿದ್ದಾರೆ.

Recommended Video

      ನಾವ್ಯಾಕೆ ಬಲಿಪಶುಗಳಾಗ್ಬೇಕು ಎಂದ ರಾಮನಗರ ಜೈಲು ಸಿಬ್ಬಂದಿ,HDK ಕೊಟ್ಟ ಭರವಸೆ ಏನು? | HDK | Ramnagar Jail

      ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಪಾದರಾಯನಪುರದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಣೆ ಮಾಡಿದ್ದು, ಈ ವ್ಯಾಪ್ತಿಯಲ್ಲಿ ಹಾಲಿ ದೈನಂದಿನ ಅಗತ್ಯ ವಸ್ತುಗಳ ಪೂರೈಸುವ ಅಂಗಡಿಗಳನ್ನು ಹೊರತುಪಡಿಸಿ ಇತರೆ ಯಾವುದೇ ರೀತಿಯ ಅಂಗಡಿ ಮುಂಗ್ಗಟ್ಟುಗಳನ್ನು ತೆರೆಯಲು ಅವಕಾಶವಿರುವುದಿಲ್ಲ.

      No Industries Should Start In District Clarified Ramanagar DC

      ರಾಮನಗರ ನಗರ ವ್ಯಾಪ್ತಿ ಹೊರತುಪಡಿಸಿ ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಲ್ ‌ಗಳು ಮತ್ತು ಬೃಹತ್ ಅಂಗಡಿ ಮಳಿಗೆಗಳನ್ನು ಹೊರತುಪಡಿಸಿ, ಸ್ಥಳೀಯ ಅಂಗಡಿಗಳು, ಒಂಟಿ ಅಂಗಡಿಗಳನ್ನು ಮತ್ತು ವಸತಿ ಸಮುಚ್ಛಯದಲ್ಲಿರುವ ಅಂಗಡಿಗಳನ್ನು ತೆರೆಯಬಹುದಾಗಿದೆ. ಈ ಅಂಗಡಿಗಳಲ್ಲಿ ಶೇ 50% ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುವುದು ಮತ್ತು ಸಿಬ್ಬಂದಿ, ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಪ್ರಕಟಣೆ ಹೊರಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+