ಯೋಗೇಶ್ವರ ಆರೋಪಕ್ಕೆ ಅನಿತಾ ಕುಮಾರಸ್ವಾಮಿ ತಿರುಗೇಟು

Posted By: Gururaj
Subscribe to Oneindia Kannada

ರಾಮನಗರ, ನವೆಂಬರ್ 4 : 'ನಮ್ಮ ಪಕ್ಷಕ್ಕೆ ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ. ನಮ್ಮ ಪಕ್ಷ ಶಕ್ತಿಯುತವಾಗಿದೆ' ಎಂದು ಶಾಸಕ ಸಿ.ಪಿ.ಯೋಗೇಶ್ವರ ಅವರ ಆರೋಪಕ್ಕೆ ಅನಿತಾ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, 'ಸಿ.ಪಿ.ಯೋಗೇಶ್ವರ ಅವರು ಬಿಜೆಪಿ ಸೇರಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಹೇಳಿದರು.

ಚನ್ನಪಟ್ಟಣದಿಂದ ಸ್ಪರ್ಧಿಸಲಿದ್ದಾರೆ ಅನಿತಾ ಕುಮಾರಸ್ವಾಮಿ

No JDS alliance with Congress : Anitha Kumaraswamy

'ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ನಾನು ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ' ಎಂದರು.

2018ರ ವಿಧಾನಸಭೆ ಚುನಾವಣೆಗೆ ಗೌಡರ ಕುಟುಂಬದ ನಾಲ್ವರು ಕಣಕ್ಕೆ

ಚನ್ನಪಟ್ಟಣದ ಭೂಹಳ್ಳಿ, ಹುಣಸನಹಳ್ಳಿ, ಕೋಡಂಬಹಳ್ಳಿ, ನಾಗವಾರ, ಮಳೂರುಪಟ್ಣ ಸೇರಿದಂತೆ ಹಲವು ಹಳ್ಳಿಗಳಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯ ಜೆಡಿಎಸ್ ಪಕ್ಷಕ್ಕೆ ಇಲ್ಲ' ಎಂದು ಹೇಳಿದರು.

'2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಜೆಡಿಎಸ್ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ. ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Anitha Kumaraswamy, wife of the former Chief Minister H.D. Kumaraswamy ruled out any alliance with the Congress.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ