ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್-ಬಿಜೆಪಿ ವಿಲೀನದ ಗಾಸಿಪ್‌ಗೆ ಕೆಪಿಸಿಸಿ ಅಧ್ಯಕ್ಷರ ಪ್ರತಿಕ್ರಿಯೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಡಿಸೆಂಬರ್ 22: ನನ್ನ ಅನುಭವದ ಪ್ರಕಾರ ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ, ರಾಜಕಾರಣ ಎಂದರೆ ಸಾಧ್ಯತೆಗಳ ಕರೆ, ಏನು ಬೇಕಾದರೂ ಆಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್-ಬಿಜೆಪಿ ವಿಲೀನದ ಗಾಸಿಪ್ ಗೆ ಪ್ರತಿಕ್ರಿಯೆ ನೀಡಿದರು.

ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಾಣೆ ಹಿನ್ನಲೆಯಲ್ಲಿ ಇಂದು ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಹುಟ್ಟೂರು ಕನಕಪುರ ತಾಲ್ಲೂಕಿನ ದೊಡ್ಡಹಾಲಹಳ್ಳಿ ಗ್ರಾಮದಲ್ಲಿ ತಮ್ಮ ಪತ್ನಿ ಉಷಾ ಅವರೊಂದಿಗೆ ಮತ ಚಲಾಯಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸ್ಪರ್ಧಿಯೇ ಅಲ್ಲವೆಂದ ಕೈ-ತೆನೆಗೆ ಸವಾಲಾದ ಬಿಜೆಪಿ!ಸ್ಪರ್ಧಿಯೇ ಅಲ್ಲವೆಂದ ಕೈ-ತೆನೆಗೆ ಸವಾಲಾದ ಬಿಜೆಪಿ!

ಜೆಡಿಎಸ್ ಹಾಗೂ ಬಿಜೆಪಿ ವಿಲೀನ ಸುದ್ದಿಯ ಬಗ್ಗೆ ಮಾತನಾಡಿದ ಡಿಕೆಶಿ, ಅವರ ಪಕ್ಷದ ತೀರ್ಮಾನ ಅವರು ಮಾಡಿಕೊಳ್ಳಲಿ, ಅದರ ಬಗ್ಗೆ ನಾವು ಮಾತಮಾಡುವುದಿಲ್ಲ. ನಾವು ನಮ್ಮ ಕಾರ್ಯಕರ್ತರು ಹಾಗೂ ನಮ್ಮ ಮೇಲೆ ನಂಬಿಕೆಯಿಟ್ಟವರ ಜೊತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ದೇಶದ ನಾನಾ ರಾಜ್ಯಗಳಲ್ಲಿ ಒಂದೊಂದು ರೀತಿಯ ರಾಜಕಾರಣ ನಡೆಯುತ್ತಿದೆ ಹಾಗೆ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

Ramanagara: Nothing Is Permanent In Politics: KPCC President DK Shivakumar

ಇನ್ನೂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಕೆಲವರು ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎನ್ನುವುದನ್ನು ಅಲ್ಲಗೆಳೆದ ಡಿ.ಕೆ ಶಿವಕುಮಾರ್, ಅಂತಹ ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಅವರ ಕಂಟ್ರೋಲ್ ನಲ್ಲಿದ್ದ ಕ್ಷೇತ್ರದಲ್ಲಿ ಮತದಾನ ಪ್ರಮಾಣದಲ್ಲಿ ಅಂತರ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯ ಸಮಸ್ಯೆಯನ್ನು ಕಾರ್ಯಕರ್ತರೊಂದಿಗೆ ಚರ್ಚೆ ಮಾಡಿದ್ದಾರೆ ಅಷ್ಟೇ ಎಂದರು.

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವಂತೆ ಸಲಹೆ ಕೂಡ ನೀಡಿದ್ದೂ, ಸರ್ಕಾರ ಅದನ್ನು ಪರಿಗಣಿಸಬಹುದಿತ್ತು. ಆದರೆ ಮೂರು ಚುನಾವಣೆಗಳನ್ನು ಪ್ರತ್ಯೇಕವಾಗಿ ಮಾಡುವುದರಿಂದ ಸರ್ಕಾರಕ್ಕೆ ಅರ್ಥಿಕ ಹೊಡೆತ ಬಿಳುತ್ತದೆ. ಸರ್ಕಾರ ಇದಕ್ಕೆ ಗೌರವಕೊಡಬೇಕಿತ್ತು ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Recommended Video

UKಯಿಂದ ಬಂದವರಿಗೆ ಸಾಂಸ್ಥಿಕ ಕ್ವಾರೆಂಟೈನ್‌, ಸರ್ಕಾರದ ನಿರ್ಧಾರದ ವಿರುದ್ಧ ಪ್ರಯಾಣಿಕರ ಆಕ್ರೋಶ | Oneindia Kannada

English summary
In my experience, politics is not permanent, but politics is a call for possibilities KPCC President DK Shivakumar responded to the gossip of the JDS-BJP merger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X