ರಾಮನಗರ; ಓಮಿಕ್ರಾನ್ ಭೀತಿ, ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ

ರಾಮನಗರ, ಡಿಸೆಂಬರ್ 03; ಕರ್ನಾಟಕದಲ್ಲಿ ಕೊರೊನಾ ರೂಪಾಂತರಿ ವೈರಸ್ ಓಮಿಕ್ರಾನ್ ಪತ್ತೆಯಾದ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯಲ್ಲೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.ಕೋವಿಡ್ ಮೂರನೇ ಅಲೆ ಹರಡದಂತೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್. ಕೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಕೋವಿಡ್ ಆಂತಕ ದೂರವಾಗಿತ್ತು. ಆದರೆ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದು ಜನರಲ್ಲಿ ಭೀತಿ ಹೆಚ್ಚಿಸಿದೆ. ಆದರೆ ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಅಷ್ಟೇನೂ ಸದ್ದು ಮಾಡುತ್ತಿಲ್ಲ.

ಇನ್ನು ಜಿಲ್ಲೆಯ ಎರಡು ಕಡೆಗಳಲ್ಲಿ ತಮಿಳುನಾಡು-ಕರ್ನಾಟಕ ಗಡಿಭಾಗವಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಅಲ್ಲದೇ ಪ್ರವಾಸಿ ತಾಣ, ಧಾರ್ಮಿಕ ಕೇಂದ್ರ ಸೇರಿದಂತೆ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ಯಾವುದೇ ನಿರ್ಬಂಧ ಹೇರಿಲ್ಲವೆಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್. ಕೆ ಹೇಳಿದ್ದಾರೆ.

Omicron Alert In Ramanagara Tamil Nadu Karnataka Border

"ಕೊರೋನಾ ನಿಯಮ ಕಡ್ಡಾಯವಾಗಿ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ರೂಪಾಂತರಿ ವೈರಸ್ ಪ್ರಕರಣ ಕಂಡುಬಂದಿಲ್ಲವಾದರೂ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

"ವಿವಿಧ ಕಾರಣಗಳಿಂದ ಸಾವಿರಾರು ಮಂದಿ ಬೆಂಗಳೂರಿಗೆ ಹೋಗಿ ಬರುವ ಹಿನ್ನಲೆಯಲ್ಲಿ ಜನರು ನಿರ್ಲಕ್ಷ್ಯ ಮಾಡಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು" ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಗಡಿಯಲ್ಲಿ ಕಟ್ಟೆಚ್ಚರ; ಜಿಲ್ಲೆಯ ಕನಕಪುರ ತಾಲೂಕಿನ ಕೊಳಗೊಂಡನಹಳ್ಳಿ-ತಮಿಳುನಾಡಿನ ತಳಿ ನಡುವಿನ ಗಡಿ ಗ್ರಾಮ, ಸರಹದ್ದಿನದೊಡ್ಡಿ ಮತ್ತು ತಮಿಳುನಾಡಿನ ಹೋಗೆನಕಲ್ ಸಂಪರ್ಕಿಸುವ ಚೆಕ್ ಪೋಸ್ಟ್ ಹಾಗೂ ಹಾರೋಹಳ್ಳಿ -‌ ಮರಳವಾಡಿ-ದೊಡ್ಡೂರು ಮೂಲಕ ತಮಿಳುನಾಡಿನ ಸಂಪರ್ಕಿಸುವ ಮಾರ್ಗದಲ್ಲೂ ಚೆಕ್ ಪೋಸ್ಟ್‌ಗಳಲ್ಲಿ ಪೋಲಿಸ್ ಕಟ್ಟೆಚ್ಚರ ವಹಿಸಿದೆ.

ತಮಿಳುನಾಡು ಸಂಪರ್ಕಿಸವ ರಾಜ್ಯದ ಗಡಿ ಗ್ರಾಮಗಳಾದ ಸರಹದ್ದಿನದೊಡ್ಡಿ, ದೊಡ್ಡೂರು ಹಾಗೂ ಕೊಳಗೊಂಡನಹಳ್ಳಿಯಲ್ಲಿ ಪೊಲೀಸ್ ಸಿಬ್ಬಂದಿಗಳು ಬ್ಯಾರೀಕೆಡ್ ಇರಿಸಿ ತಮಿಳುನಾಡಿನಿಂದ ಬರುವ ಎಲ್ಲಾ ವಾಹನ ತಪಾಸಣೆ ಮಾಡುತ್ತಿದ್ದಾರೆ.‌

ತಮಿಳುನಾಡಿನ ಯಾವುದೇ ವಾಹನ ಗಡಿಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ಎರಡು ಡೋಸ್ ಲಸಿಕೆ ಪಡೆದಿದರುವ ಬಗ್ಗೆ ಮಾಹಿತಿ ಕಲೆ ಹಾಕುವುದರ ಜೊತೆಗೆ, ಆರ್ ಟಿಪಿಸಿಆರ್ ಕೊರೊನಾ ನೆಗೆಟಿವ್ ವರದಿ ಕಡ್ಡಾಯವಾಗಿ ಇರುವಂತೆ ಆದೇಶ ಹೊರಡಿಸಲಾಗಿದೆ.

ಗಡಿ ಗ್ರಾಮಗಳಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಗಳು ಜಿಲ್ಲೆಯನ್ನು ಪ್ರವೇಶ ಮಾಡುವವರು ಕೋವಿಡ್ ಲಸಿಕೆ ಪಡೆದಿರು ಬಗ್ಗೆ ಪರಿಶೀಲನೆ ಮಾಡುತ್ತಿದ್ದು, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದ ಜನರನ್ನು, ವಾಹಮಗಳನ್ನು ವಾಪಸ್ಸು ಕಳಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+