ರಾಮನಗರ: ಟ್ರ್ಯಾಕ್ಟರ್ ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಾಯ
ರಾಮನಗರ, ಡಿಸೆಂಬರ್ 12: ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಮಗುಚಿಬಿದ್ದ ಪರಿಣಾಮ ಒಬ್ಬ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಭೂವಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳದ ದೇವಪ್ಪನವರ ಪುತ್ರ ಬಸವರಾಜು (30) ಮೃತಪಟ್ಟ ದುರ್ದೈವಿ. ರಮೇಶ್ ಮತ್ತು ದ್ಯಾವಣ್ಣ ಗಂಭೀರ ಗಾಯಗೊಂಡಿದ್ದು, ಇವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂವಳ್ಳಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಿಂದ ನೀರು ತುಂಬಿದ್ದ ಟ್ಯಾಂಕರ್ ನ್ನು ಎಳೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಬಸವರಾಜು ಗಂಭೀರಗಾಯಗೊಂಡಿದ್ದು ತೀವ್ರ ರಕ್ತಸ್ರಾವವಾದ ಕಾರಣ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕರೆದೊಯ್ಯು ವೇಳೆ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ದ್ಯಾವಣ್ಣ ಮತ್ತು ರಮೇಶ್ ಅವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications