ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲಿ ಕೋವ್ಯಾಕ್ಸಿನ್ ಲಸಿಕೆ 2ನೇ ಡೋಸ್ ಎಲ್ಲೆಲ್ಲಿ ಲಭ್ಯ?

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 3: ರಾಮನಗರ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಎರಡನೇ ಡೋಸ್ ಮಾತ್ರ ಲಭ್ಯವಿದ್ದು, ಮೊದಲ ಡೋಸ್ ಸದ್ಯಕ್ಕೆ ನೀಡುವುದಿಲ್ಲ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪದ್ಮ ತಿಳಿಸಿದ್ದಾರೆ.

ರಾಮನಗರ ಜಿಲ್ಲಾ ಆಸ್ಪತ್ರೆ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮಾತ್ರ ಲಭ್ಯವಿರುತ್ತದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪದ್ಮ ಅವರು ಹೇಳಿದರು.

ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ತೆಗೆದುಕೊಂಡು 6 ವಾರಗಳನ್ನು ಪೂರೈಸಿದ ಫಲಾನುಭವಿಗಳು 2ನೇ ಡೋಸ್‌ನ್ನು ರಾಮನಗರ ಜಿಲ್ಲಾ ಆಸ್ಪತ್ರೆ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಬಹುದು.

Ramanagara: Only Covaxin 2nd Dose Is Available In The District: RCH Officer

ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲನೇ ಡೋಸ್ ನೀಡಲು ಬಳಸುತ್ತಿಲ್ಲ. ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಎರಡನೇ ಡೋಸ್ ನೀಡಲು ಮಾತ್ರ ಬಳಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ ಅಧಿಕಾರಿಗಳು, ಲಸಿಕೆ ಸಂಬಂಧ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ, ಪ್ರಶ್ನೆಗಳಿದ್ದಲ್ಲಿ ಅಥವಾ ಸಲಹೆಗಳು ಬೇಕಾಗಿದ್ದಲ್ಲಿ ಜಿಲ್ಲಾ ಮತ್ತು ತಾಲ್ಲೂಕಿನ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

Recommended Video

Sonu Sood ಈಗ ಕೆಲವರ ಪಾಲಿನ ದೇವರು | Oneindia Kannada

ಜಿಲ್ಲಾ ಕಂಟ್ರೋಲ್ ರೂಂ-8277517672, ಚನ್ನಪಟ್ಟಣ-080-27251765, ಕನಕಪುರ -080-27522442, ಮಾಗಡಿ 080-27745233 ಮತ್ತು ರಾಮನಗರ-080-27271228 ಅನ್ನು ಸಂಪರ್ಕಿಸಬಹುದು ಎಂದು ರಾಮನಗರ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The second dose of Covaxin vaccine is only available in Ramanagara district and the first dose is not given now, District RCH Officer Dr Padma said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X