ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಡಿ.22ರಿಂದ ಪಾದಯಾತ್ರೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಡಿಸೆಂಬರ್ 2: "ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಡಿ.22ರಿಂದ ಚಾಮರಾಜನಗರ ಜಿಲ್ಲೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಜನಾಂದೋಲನ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ," ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಘೋಷಣೆ ಮಾಡಿದರು.

ರಾಮನಗರದ ಅರ್ಚಕರಹಳ್ಳಿಯ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಜನಾಂದೋಲನದ ಕಾರ್ಯಕ್ರಮ ಮಾಹಿತಿ ಹಂಚಿಕೊಂಡರು.

"ಡಿಸೆಂಬರ್‌ 22ರಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾರಂಭವಾಗುವ ಜನಾಂದೋಲನ ಯಾತ್ರೆ 6 ಜಿಲ್ಲೆಗಳಲ್ಲಿ ಒಂದೊಂದು ದಿನ ಒಂದು ಜಿಲ್ಲೆಯಲ್ಲಿ ಜನಾಂದೋಲನ ಸಭೆ ನಡೆಸಲಾಗುವುದು. ಸುಮಾರು 380 ಕಿಮೀ ಸಂಚರಿಸಿವ ಜನಾಂದೋಲನ ಯಾತ್ರೆ ಅಂತಿಮವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾವಣೆಗೊಂಡು, ಮೇಕೆದಾಟು ಯೋಜನೆ ಆಗಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುತ್ತದೆ. ಇದಕ್ಕೆ ಸರಕಾರದ ಅನುಮತಿ ಪಡೆದಿರುವುದಾಗಿ," ರಮೇಶ್ ಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಮನಗರ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್‍ಗೌಡ, ರಾಜ್ಯ ಉಪಾಧ್ಯಕ್ಷ ಬೆಂಕಿ ಶ್ರೀಧರ್, ಚಾಮರಜನಗರ ಜಿಲ್ಲಾಧ್ಯಕ್ಷ ಮಲ್ಲು, ಕೋಲಾರ ಜಿಲ್ಲಾಧ್ಯಕ್ಷ ವೆಂಕಟೇಶ್ ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಯರಗನಹಳ್ಳಿ ಮಹಾಲಿಂಗು, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಚಂದ್ರೇಗೌಡ, ಬೆಳಕೆರೆ ನಾಗೇಶ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

 ತಮಿಳುನಾಡಿನ ಕ್ಯಾತೆ ಸರಿಯಲ್ಲ; ಅನ್ನದಾನೇಶ್ವರ ಸ್ವಾಮೀಜಿ

ತಮಿಳುನಾಡಿನ ಕ್ಯಾತೆ ಸರಿಯಲ್ಲ; ಅನ್ನದಾನೇಶ್ವರ ಸ್ವಾಮೀಜಿ

"ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ನಿರಂತರವಾಗಿ ಅವರಿಗೆ ನೀರು ಪೂರೈಸಲಾಗುತ್ತಿದೆ. ಹೀಗಿದ್ದರೂ ಸಹ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ," ಎಂದು ಆದಿ ಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

"ಸುಮಾರು 80 ಟಿಎಂಸಿಯಷ್ಟು ನೀರು ಕಾವೇರಿ ನದಿಯಿಂದ ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗುತ್ತಿದೆ. ಮೇಕೆದಾಟು ಅಣೆಕಟ್ಟು
ನಿರ್ಮಾಣ ಮಾಡಿದರೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಗಟ್ಟಬಹುದು ಜೊತೆಗೆ ವಿದ್ಯುತ್ ಉತ್ಪಾದನೆಯನ್ನು ಮಾಡಬಹುದು. ಮೇಕೆದಾಟು ಯೋಜನೆ ಜಾರಿಗಾಗಿ ಇಚ್ಛಾಶಕ್ತಿ ತೋರಬೇಕಿದೆ," ಎಂದರು.

 ಯೋಜನೆಯಿಂದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗುವುದಿಲ್ಲ

ಯೋಜನೆಯಿಂದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗುವುದಿಲ್ಲ

ಕೇಂದ್ರ ಮತ್ತು ರಾಜ್ಯದಲ್ಲಿ ಏಕ ಪಕ್ಷದ ಅಧಿಕಾರವಿದ್ದು, ರಾಜ್ಯದ ಮಂತ್ರಿಮಂಡಲ ಕೇಂದ್ರ ಸರಕಾರಕ್ಕೆ ಮೇಕೆದಾಟು ಯೋಜನೆಯಿಂದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗುವುದಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂದು ಹೇಳಿದರು.

ಜನಪ್ರತಿನಿಧಿಗಳು, ರಾಜಕಾರಣಿಗಳು, ಸಂಘ- ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡು ಚಳವಳಿ ರೂಪಿಸಿದಾಗ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯದ ಜನರು ಸುಮ್ಮನೆ ಕುಳಿತುಕೊಳ್ಳದೆ ನಿರಂತರ ಚಳವಳಿಯ ಮೂಲಕ ಅಣೆಕಟ್ಟು ಜಾರಿಗೆ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಮೇಲೆ ಒತ್ತಡ ಹಾಕಬೇಕಿದೆ ಎಂದು ತಿಳಿಸಿದರು.

 ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಸುಮಾರು 50 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಮೇಕೆದಾಟು ಯೋಜನೆ ಜಾರಿಯಿಂದ ರಾಜ್ಯದ 6ರಿಂದ 7 ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಈ ಯೋಜನೆಗೆ ನೆರೆ ರಾಜ್ಯ ತಮಿಳುನಾಡು ತಡೆ ಒಡ್ಡುವುದು ಸರಿಯಲ್ಲ. ಈಗಾಗಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

 ಕುಡಿಯುವ ನೀರಿನ ಯೋಜನೆಗೆ ತೊಂದರೆ ಸರಿಯಲ್ಲ

ಕುಡಿಯುವ ನೀರಿನ ಯೋಜನೆಗೆ ತೊಂದರೆ ಸರಿಯಲ್ಲ

ತಮಿಳುನಾಡು ಸರ್ಕಾರ ಈಗಾಗಲೇ ಹೊಗೇನಕಲ್ ಯೋಜನೆ ಜಾರಿ ಮಾಡಿದೆ. ಅದಕ್ಕೆ ಕರ್ನಾಟಕದಿಂದಾಗಲಿ, ಕೇಂದ್ರ ಸರ್ಕಾರದಿಂದಾಗಲಿ ಯಾವುದೇ ಚಕರಾವಿಲ್ಲ. ಆದರೆ ರಾಜ್ಯ ಕೈಗೊಳ್ಳುವ ಕುಡಿಯುವ ನೀರಿನ ಯೋಜನೆಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಈ ನಿಟ್ಟಿನಲ್ಲಿ 6 ಜಿಲ್ಲೆಗಳಲ್ಲಿ ಜನಾಂದೋಲನ ಪಾದಯಾತ್ರೆ ಮಾಡುವ ಮೂಲಕ ಜನರಿಗೆ ಮೇಕೆದಾಟು ಆಣೆಕಟ್ಟಿನ ಅವಶ್ಯಕತೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.

ಜನ ಜಾಗೃತಿಯ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸುತ್ತೇವೆ. ಸರ್ಕಾರ ನಮ್ಮ ಹೋರಾಟಕ್ಕೆ ಮಣಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ಎಲ್. ರಮೇಶ್ ಗೌಡ ಎಚ್ಚರಿಸಿದರು.

Recommended Video

Punjab ತಂಡದಿಂದ Rahul ಆಚೆ ಬಂದಿದ್ದರ ಹಿಂದಿನ ರಹಸ್ಯವೇನು | Oneindia Kannada

English summary
Padayatra from Dec 22 from Chamarajanagar district to Freedom Park in Bengaluru to demand government to quickly implement Mekedadu Dam project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X