ಮಾಗಡಿಯಲ್ಲೂ ಮದ್ಯ ಸಿಗದ ಕಾರಣಕ್ಕೆ ವ್ಯಕ್ತಿ ಆತ್ಮಹತ್ಯೆ

ಮಾಗಡಿ, ಮಾರ್ಚ್ 31: ಕೊರೊನಾ ಮಹಾಮಾರಿ ಹರಡುವುದನ್ನು ತಡೆಯಲು ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಲಾಕ್ ಡೌನ್ ಸಮಯದಲ್ಲಿ ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಯೂ ಬೆಳಕಿಗೆ ಬರುತ್ತಿದೆ.

ಉಡುಪಿ, ಹುಬ್ಬಳ್ಳಿ, ಕೇರಳದಲ್ಲಿ ಕುಡಿಯಲು ಮದ್ಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಿದ್ದವು. ಉಡುಪಿಯಲ್ಲಿ ಮದ್ಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಲಾಕ್ ಡೌನ್ ಆದಾಗಿನಿಂದ ಇದುವರೆಗೆ ಆತ್ಮಹತ್ಯೆ ಮಾಡಿಕೊಂಡಿರುವವರ ಸಂಖ್ಯೆ ಏಳಕ್ಕೆ ಏರಿದೆ. ಇದೀಗ ಮಾಗಡಿಯಲ್ಲೂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Person Committes Suicide For Not Getting Alcohol In Magadi Because Of Lockdown

ಮಾಗಡಿಯ ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ರಮೇಶ್ (35) ಎಂಬಾತ ಕುಡಿಯಲು ಎಣ್ಣೆ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದವನು. ಕೊರೊನಾ ಲಾಕ್ ಡೌನ್ ನಿಂದಾಗಿ ಏಳು ದಿನಗಳಿಂದ ಮದ್ಯ ಸಿಗದೇ ಪರದಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+