PM Modi In Channapatna : ವಾಹನ ಸವಾರರೇ ಗಮನಿಸಿ: ಏಪ್ರಿಲ್ 30ರಂದು ಬೆಂಗಳೂರು-ಮೈಸೂರು ಸಂಚಾರ ಮಾರ್ಗದಲ್ಲಿ ಬದಲಾವಣೆ!

ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಷ್ಟ್ರ ನಾಯಕರು ರಾಜ್ಯದ ಕಡೆ ಮುಖ ಮಾಡಿದ್ದು, ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಆಗಮಿಸಲಿದ್ದಾರೆ. ಮೋದಿ ಆಗಮನದಿಂದ ಹಲವು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಚನ್ನಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಬೆಂಗಳೂರು ಹೆದ್ದಾರಿ ಮತ್ತು ಚನ್ನಪಟ್ಟಣ-ಮದ್ದೂರು ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಸೂಚಿಯನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ.

PM Modi Channapatna Rally: Bengaluru-Mysuru National Highway Routes Diverted

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಸಮೀಪದ ನರೇಂದ್ರ ಮೋದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೈಸೂರು-ಬೆಂಗಳೂರು ಮತ್ತು ಚನ್ನಪಟ್ಟಣ-ಮದ್ದೂರು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೆದ್ದಾರಿಗಳಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು ಪರ್ಯಾಯ ಮಾರ್ಗಗಳಲ್ಲಿ ಓಡಾಡಲು ಸೂಚಿಸಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುವ ವಾಹನಗಳಿಗೆ ಮದ್ದೂರು-ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲು ಸೂಚಿಸಲಾಗಿದೆ. ಇದಲ್ಲದೆ, ಮಳವಳ್ಳಿ-ಕನಕಪುರ-ಹಾರೋಹಳ್ಳಿ ಮಾರ್ಗವಾಗಿ ಕೂಡ ರಾಜಧಾನಿಯನ್ನು ಸೇರಿಕೊಳ್ಳಬಹುದಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಓಡಾಡುವ ವಾಹನಗಳಿಗೆ ಬಿಡದಿ - ಹಾರೋಹಳ್ಳಿ - ಕನಕಪುರ - ಮಳವಳ್ಳಿ ಮಾರ್ಗವಾಗಿ ಸಾಂಸ್ಕೃತಿಕ ರಾಜಧಾನಿಗೆ ಪ್ರಯಾಣಿಸಲು ಸೂಚನೆ ನೀಡಲಾಗಿದೆ.

ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ ಪ್ರಚಾರ

ಹಳೇ ಮೈಸೂರು ಭಾಗದಲ್ಲಿ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಹೆಚ್ಚಿನ ಒತ್ತು ನೀಡುತ್ತಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಈ ಭಾಗದಲ್ಲಿ ಮೋದಿ ಪ್ರಚಾರ ಮಾಡಲಿದ್ದು ಪಕ್ಷದ ಬಲವರ್ಧನೆಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ. ಶೆಟ್ಟಿಹಳ್ಳಿ ಗ್ರಾಮದ ಬಳಿ ಮೂವತ್ತು ಎಕರೆ ಪ್ರದೇಶದಲ್ಲಿ ಸಮಾವೇಶ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸುಮಾರು ಮೂರು ಲಕ್ಷ ಜನ ಸಮಾವೇಶಕ್ಕೆ ಆಗಮಿಸುತ್ತಾರೆ ಎಂದು ಬಿಜೆಪಿ ಅಂದಾಜಿಸಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದು, ಜೆಡಿಎಸ್‌ನಿಂದ ಹೆಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಏಪ್ರಿಲ್ 30ರಂದು ಆ ಭಾಗದಲ್ಲಿ ಓಡಾಡುವ ಸಾರ್ವಜನಿಕರು, ವಾಹನಗಳು ಸಾಧ್ಯವಾದಷ್ಟು ಪ್ರಯಾಣ ಮುಂದೂಡುವುದು ಒಳಿತು. ಇಲ್ಲವಾದಲ್ಲಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+