• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ; ಬಸ್ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

By ರಾಮನಗರ ಪ್ರತಿನಿಧಿ
|

ರಾಮನಗರ, ಸೆಪ್ಟೆಂಬರ್ 12: ಬಸ್ ನಿಲ್ದಾಣದಲ್ಲಿ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಪಾಳ್ಯ ಬಳಿ ನಡೆದಿದೆ.

ವಿಚ್ಛೇದನದ ದೂರಲ್ಲಿ ಲಾಲೂ ಮಗನನ್ನು ಮಾದಕ ವ್ಯಸನಿ ಎಂದ ಐಶ್ವರ್ಯಾ

ಜಿಲ್ಲೆಯಾದ್ಯಂತ ಗಾಂಜಾ ಮಾರಾಟದ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಅವರು ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ‌ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಗಾಂಜಾ ಮಾರಾಟ ಜಾಲದ ಬೆನ್ನು ಬಿದ್ದ ಪೊಲೀಸರು ಖಚಿತ ಮಾಹಿತಿ ಮೇಲೆ ಬಸ್ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆನಂದ ಗುಬ್ಬಲಾಳ (20) ದಿಲೀಪ್ (23) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ; 4 ಕೆ.ಜಿ ಗಾಂಜಾ ವಶ

ಬಂಧಿತರಿಂದ 140 ಗ್ರಾಂ ಗಾಂಜಾ ಹಾಗೂ ಒಂದು ಆಕ್ಟಿವ್ ಹೋಂಡಾವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಹತ್ತು ದಿನಗಳ ಹಿಂದೆ ರಾಮನಗರದ ಮನೆಯೊಂದರ ಮೇಲೆ ದಾಳಿ ಮಾಡಿ 44 ಕೆ.ಜಿ. ಅಕ್ರಮ ಗಾಂಜಾ ದಾಸ್ತಾನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ, ಅಂತರ ರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿದ್ದರು.

English summary
Police arrested two people who were selling drugs at bus station at kaggalipura in ramanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X