ಲಾರಿ ಹರಿದು ಚುನಾವಣಾ ಕರ್ತವ್ಯದಲ್ಲಿದ್ದ ಪೋಲಿಸ್ ಪೇದೆ ಸಾವು
ರಾಮನಗರ, ಏಪ್ರಿಲ್ 15 : ಚುನಾವಣಾ ಕರ್ತವ್ಯದಲ್ಲಿದ್ದ ಬಿಡದಿ ಪೊಲೀಸ್ ಠಾಣೆಯ ಮುಖ್ಯಪೇದೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮುಖ್ಯಪೇದೆ ಮೃತಪಟ್ಟಿದ್ದಾರೆ.
ಚುನಾವಣೆ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಗೇಟ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಶನಿವಾರ ರಾತ್ರಿ ಮುಖ್ಯಪೇದೆ ಮಹಾಲಿಂಗ (37) ಚುನಾವಣಾ ಸಿಬ್ಬಂದಿಯ ಜೊತೆ ಕಾರು ತಪಾಸಣೆ ಮಾಡುತ್ತಿದ್ದ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ಲಾರಿ (ka.28-c.6500) ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಳು ಪೇದೆಯನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ರಮೇಶ್ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೂಡ್ಸ್ ಲಾರಿ ಚಾಲಕನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಚಾಲಕ ಮದ್ಯಪಾನ ಮಾಡಿ ವಾಹನ ಓಡಿಸುತ್ತಿದ್ದ ಎಂದು ತಿಳಿದು ಬಂದಿದೆ.












Click it and Unblock the Notifications