• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೋಮ್ ಗಾರ್ಡ್ ಸಿಬ್ಬಂದಿಗೆ ಆಹಾರ ಧಾನ್ಯ ವಿತರಿಸಿದ ಪೊಲೀಸರು

By ರಾಮನಗರ ಪ್ರತಿನಿಧಿ
|

ರಾಮನಗರ, ಏಪ್ರಿಲ್ 07: ಕೊರೊನಾ ವೈರಸ್ ರೋಗ ವಿರುದ್ಧದ ಹೋರಾಟದಲ್ಲಿ ಪೊಲೀಸರೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಹೋಂ ಗಾರ್ಡ್ ಸಿಬ್ಬಂದಿಗೆ ಆಹಾರ ಧಾನ್ಯವನ್ನು ರಾಮನಗರ ಪೊಲೀಸರು ವಿತರಿಸಿದರು.

ಕೊರೊನಾ ವೈರಸ್ ಹೋರಾಟದಲ್ಲಿ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ದುಡಿಯುತ್ತಿರುವ ಆರಕ್ಷಕ ಸಿಬ್ಬಂದಿಗೆ ಹೆಗಲು ಕೊಟ್ಟು ದುಡಿಯುತ್ತಿರುವ ಹೋಂ ಗಾರ್ಡ್ ಸಿಬ್ಬಂದಿಗಳಿಗೆ ಆಹಾರ ಪದಾರ್ಥಗಳನ್ನು ಡಿವೈಎಸ್ಪಿ ಪುರುಷೋತ್ತಮ್ ಹಾಗು ಸಿಪಿಐ ನರಸಿಂಹಮೂರ್ತಿ ಆಹಾರ ಧಾನ್ಯ ವಿತರಿಸಿದರು.

ರಾಮನಗರ ಜಿಲ್ಲೆಯಲ್ಲಿ ಸುಮಾರು ಆರು 600 ಹೋಂ ಗಾರ್ಡ್ ಸಿಬ್ಬಂದಿಗಳು ಪೊಲೀಸ್ ಇಲಾಖೆಯೊಂದಿಗೆ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ 600 ಸಿಬ್ಬಂದಿಗಳಿಗೆ ತಲಾ 3 ಕೆ.ಜಿ ಅಕ್ಕಿಯನ್ನು ಹಾಗೂ 3 ಕೆ.ಜಿ ರಾಗಿ ಹಿಟ್ಟು (ಪೌಡರ್) ವಿತರಿಸಿ ನೆರವಾದರು.

ರಾಮನಗರ ಉಪ ವಿಭಾಗದ ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಗರದ ಸಂಚಾರಿ ಪೊಲೀಸ್ ಠಾಣೆ ಮುಂದೆ ಆಹಾರ ಧಾನ್ಯ ವಿತರಿಸಿದರು. ಟೌನ್ ಸರ್ಕಲ್ ಇನ್ಸ್ ಪೆಕ್ಟರ್ ನರಸಿಂಹಮೂರ್ತಿ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು.

English summary
Ramanagara Police distributed food Groceries to home guard staff working day and night with police in the fight against coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X