ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಮನೆ ಮೇಲೆ ಪೊಲೀಸ್ ದಾಳಿ
ರಾಮನಗರ, ಆಗಸ್ಟ್ 16: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿಯಾಗಿದೆ.
ಮಾಗಡಿ ಹಾಗೂ ಕುದೂರು ಮತ್ತು ತಾವರೆಕೆರೆ ರೌಡಿಶೀಟರ್ ಗಳನ್ನು ಮಾಗಡಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೌಡಿಶೀಟರ್ ಮನೆ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದ ಆಯುಧಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಎಸ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಾಗಡಿ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ ನಡೆಸಿದರು.

ಬೆಂಗಳೂರಿಗೆ ಅಂಟಿಕೊಂಡಿರುವ ತಾವರೇಕೆರೆ ಹಾಗೂ ಕುದೂರಿನಲ್ಲಿ ಯಾವುದೇ ರೀತಿಯ ಗಲಭೆ ನಡೆಯದಂತೆ ರೌಡಿಗಳಿಗೆ ಪೊಲೀಸರು ತಾಕೀತು ಮಾಡಿದರು.












Click it and Unblock the Notifications