• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಮನೆ ಮೇಲೆ ಪೊಲೀಸ್ ದಾಳಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್‌ 16: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿಯಾಗಿದೆ.

ಮಾಗಡಿ ಹಾಗೂ ಕುದೂರು ಮತ್ತು ತಾವರೆಕೆರೆ ರೌಡಿಶೀಟರ್ ಗಳನ್ನು ಮಾಗಡಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೌಡಿಶೀಟರ್ ಮನೆ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದ ಆಯುಧಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ ರಾಮನಗರ ಪೊಲೀಸ್ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ ರಾಮನಗರ ಪೊಲೀಸ್

ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಎಸ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಾಗಡಿ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ ನಡೆಸಿದರು.

ಬೆಂಗಳೂರಿಗೆ ಅಂಟಿಕೊಂಡಿರುವ ತಾವರೇಕೆರೆ ಹಾಗೂ ಕುದೂರಿನಲ್ಲಿ ಯಾವುದೇ ರೀತಿಯ ಗಲಭೆ ನಡೆಯದಂತೆ ರೌಡಿಗಳಿಗೆ ಪೊಲೀಸರು ತಾಕೀತು ಮಾಡಿದರು.

English summary
The Police Raided on the house of Rowdy sheeters coming under the of the Magadi police station in Ramanagar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X