• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೊಂಬೆ ತಯಾರಿಕಾ ಉದ್ಯಮದ ಪುನಶ್ಚೇತನಕ್ಕೆ ಆಗ್ರಹಿಸಿ ಪಾದಯಾತ್ರೆ

By ರಾಮನಗರ ಪ್ರತಿನಿಧಿ
|

ರಾಮನಗರ, ಸೆಪ್ಟೆಂಬರ್ 12: ವಿಶ್ವವಿಖ್ಯಾತಿ ಪಡೆದ ಚನ್ನಪಟ್ಟಣದ ಬೊಂಬೆ ತಯಾರಿಕಾ ಉದ್ಯಮದ ಪುನಶ್ಚೇತನಕ್ಕೆ ಮುಂದಾಗಬೇಕೆಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಎರಡು ದಿನಗಳ ಕಾಲ ಚನ್ನಪಟ್ಟಣದಿಂದ ರಾಮನಗರದ ಜಿಲ್ಲಾಧಿಕಾರಿಗಳ ಸಂಕೀರ್ಣದವರೆಗ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ನಗರದ ಕನಕಪುರ ರಸ್ತೆಯ ಶಾಂತಿನಿಕೇತನ ರೆಸಿಡೆನ್ಸಿಯಲ್ ಕಾಲೇಜಿನ ಅವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಸೆ. 24 ಹಾಗೂ 25 ರಂದು ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಧಾರವನ್ನು ಘೋಷಣೆ ಮಾಡಿದರು. ಬೊಂಬೆ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕು, ಬೊಂಬೆ ತಯಾರಿಸುವ ಕಾರ್ಮಿಕರ ಸಮಸ್ಯೆಗಳ ಪರಿಹಾರ ಹಾಗೂ ಬೊಂಬೆ ಆಟಿಕೆ ಕ್ಲಸ್ಟರ್ ಚನ್ನಪಟ್ಟಣದಲ್ಲೇ ಸ್ಥಾಪನೆ ಮಾಡುವಂತೆ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಒತ್ತಾಯಿಸಿದರು.

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಭಾರತದ ಅತಿದೊಡ್ಡ ಬೊಂಬೆ ಉತ್ಪನ್ನ ಬಗ್ಗೆ ಮಾತನಾಡಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಕೊಪ್ಪಳದಲ್ಲಿ 400 ಎಕರೆ ಪ್ರದೇಶದಲ್ಲಿ ಬೊಂಬೆ ಉತ್ಪನ್ನ ಸ್ಥಾಪನೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕದ ವೈಟ್ ಹೌಸ್ ನಲ್ಲಿ ಚನ್ನಪಟ್ಟಣದ ಬೊಂಬೆಗಳು ರಾರಾಜಿಸಿರುವಾಗ ಬೊಂಬೆ ಉತ್ಪನ್ನ ಘಟಕವನ್ನು ಚನ್ನಪಟ್ಟಣದಲ್ಲಿ ಸ್ಥಾಪನೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮೋದಿ ಪ್ರಶಂಸೆಗೆ ಪಾತ್ರವಾದ ಯಡಿಯೂರಪ್ಪ ಸರಕಾರದ ಈ ನಿರ್ಧಾರ

   HD kumaraswamy : ನಾವು ಬೇರೆಯವರ ತರ ಕದ್ದು ಮುಚ್ಚಿ ಕೊಲಂಬೊ ಹೋಗಿರ್ಲಿಲ್ಲ | Oneindia Kannada

   ಬೊಂಬೆ ನಾಡು ಚನ್ನಪಟ್ಟಣದಲ್ಲಿ ಅಂತರರಾಷ್ಟ್ರೀಯ ಘಟಕ ಸ್ಥಾಪನೆಯಾಗಬೇಕು. ಆಗ ಲಕ್ಷಾಂತರ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದಿಂದ ರಾಮನಗರದವರೆಗೆ ಎರಡು ದಿನಗಳ ಪಾದಯಾತ್ರೆ ನಡೆಸಲಾಗುವುದು. ಕೋವಿಡ್ ಇರುವ ಹಿನ್ನೆಲೆ ಸರಳವಾಗಿ ಕಡಿಮೆ ಸಂಖ್ಯೆಯಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಇದೇ ವೇಳೆ ರಮೇಶ್ ಗೌಡ ತಿಳಿಸಿದ್ದಾರೆ.

   English summary
   Kasturi Karnataka Janapar Forum has decided to take two days procession/padayatra from Channapatna to ramanagar dc office demanding revival of the world renowned puppet manufacturing industry in district
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X