ರಾಮನಗರದ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧ

ರಾಮನಗರ, ಡಿಸೆಂಬರ್ 29: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕೋವಿಡ್ ಹರಡುವಿಕೆ ತಡೆಯಲು ರಾಮನಗರ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನವರಿ 2ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡಿಸೆಂಬರ್ 30ರಿಂದ ಜನವರಿ 2ರ ತನಕ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ರಾಮನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಹೆಚ್ಚು ಜನರು ಸೇರುವ ಸಾಧ್ಯತೆ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ಪ್ರಸಿದ್ಧ ಆರು ಪ್ರವಾಸಿತಾಣಗಳಾದ ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ, ಮಾಗಡಿ ತಾಲ್ಲೂಕಿನ ಸಾವನದುರ್ಗ, ಮಂಚನಬೆಲೆ ಜಲಾಶಯ ಮತ್ತು ಕನಕಪುರ ತಾಲ್ಲೂಕಿನ ಸಂಗಮ, ಮೇಕೆದಾಟು ಹಾಗೂ ಚುಂಚಿಪಾಲ್ಸ್ ಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Prohibitory Order In Tourist Place Till January 2 2021

ಡಿಸೆಂಬರ್ 30 ರಿಂದ ಜನವರಿ 2ರ ತನ ಈ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

‌ಬೆಂಗಳೂರಿನ ಸಮೀಪದಲ್ಲಿರುವ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳು ಅಂದರೆ ಬೆಂಗಳೂರು ನಿವಾಸಿಗಳಿಗೆ ಅಚ್ಚುಮೆಚ್ಚು. ರಜಾ ದಿನಗಳು, ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ.

ಕೋವಿಡ್-19 ಬಳಿಕ ಪ್ರವಾಸಿತಾಣಗಳಲ್ಲಿ ಜನಜಂಗುಳಿ ಕಡಿಮೆಯಾಗಿತ್ತು. ಈಗ ಪುನಃ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚು ಜನರು ಭೇಟಿ ನೀಡುತ್ತಿದ್ದಾರೆ. ಆದ್ದರಿಂದ, ಕೋವಿಡ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಕೋವಿಡ್ ತಡೆಗಟ್ಟುವ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿವೆ. ಮಾರ್ಗಸೂಚಿಗಳ ಅನ್ವಯ ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದ್ದಾರೆ.

ಈ ಕ್ರಮಗಳನ್ನು ಜಾರಿಗೆ ತರುವುವಲ್ಲಿ ಲೋಪವಾದರೆ ತಾಲೂಕು ದಂಡಾಧಿಕಾರಿಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇರ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಯಾವ-ಯಾವ ಪ್ರವಾಸಿ ತಾಣಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+