• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

By ರಾಮನಗರ ಪ್ರತಿನಿಧಿ
|

ರಾಮನಗರ, ಆಗಸ್ಟ್ 12: ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಸಂಬಂಧ ಸುದ್ದಿಗೆ ತೆರಳಿದ್ದ ಪ್ರರ್ತಕರ್ತರ ಮೇಲೆ ಪುಂಡರು ಹಲ್ಲೆ ಮಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ರಾಮನಗರ ಜಿಲ್ಲಾ ಪೊಲೀಸ್ ಭವನದ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ರಾತ್ರಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಯ ಚಿತ್ರೀಕರಣ ಮಾಡುತ್ತಿದ್ದ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಹಾಗೂ ವರದಿಗಾರರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳ ಮೇಇನ ಹಲ್ಲೆ ಸಾಮಾನ್ಯವಾಗಿದ್ದು, ಅತಂಹ ಪುಂಡರ ವಿರುದ್ಧ ಸರ್ಕಾರವು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಮತಾಂಧ ಮುಸಲ್ಮಾನರ ಗಲಭೆಯನ್ನು ಸಜ್ಜನ ಮುಸಲ್ಮಾನರು ಖಂಡಿಸಬೇಕು: ಸಚಿವ ಈಶ್ವರಪ್ಪ

ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಎಂದು ಕರೆಯುವ ಪತ್ರಿಕಾರಂಗ ಇಂದು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಗಲಭೆ ಸುದ್ದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವ ಜೊತೆಗೆ ಪತ್ರಕರ್ತರರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದರು.

ಇನ್ನು ಜಿಲ್ಲಾ ಪೊಲೀಸ್ ಭವನದ ಮೆಟ್ಟಿಲುಗಳ ಮುಂದೆ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.

English summary
Various organizations have staged protests in front of the Ramanagara district police house, condemning the attack on the Journalists in of DJ Halli in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X