ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಕಪುರ ವೈದ್ಯಕೀಯ ಕಾಲೇಜು ಸ್ಥಳಾಂತರ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 16: ಕಳೆದ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕನಕಪುರ ತಾಲೂಕಿಗೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಏಕಾಏಕಿ ಚಿಕ್ಕಬಳ್ಳಾಪುರ ಜಿಲ್ಲೆಗೆ ವರ್ಗಾಯಿಸಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಲೇಜು ಸ್ಥಳಾಂತರವನ್ನು ಕೈ ಬಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿ

ರಾಮನಗರ ಜಿಲ್ಲೆಯಲ್ಲಿ ಆಗಬೇಕಿದ್ದ ಮೆಡಿಕಲ್ ಕಾಲೇಜನ್ನು ರಾಜಕೀಯ ದುರುದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನಮ್ಮ ಜಿಲ್ಲೆಗೆ ಅನ್ಯಾಯ ಮಾಡಿದೆ. ಸಿಎಂ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಸ್ವಹಿತಾಶಕ್ತಿಯಿಂದ ಈ ರೀತಿ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

Protest In Ramanagar Against The Transfer Of Medical College To Chikkaballapur District

ಈ ಕೂಡಲೇ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜು ಸ್ಥಳಾಂತರ ಆದೇಶವನ್ನು ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯ ಎಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡಿ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

English summary
Karnataka rakshana vedike Swabhimani bana activists protested against the transfer of medical college sanctioned to Kanakapura Taluk during the last JDS-Congress government's to Chikkaballapur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X