ರಾಜ್ಯದ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ರಾಮನಗರದಲ್ಲಿ ಪ್ರತಿಭಟನೆ
ರಾಮನಗರ, ಆಗಸ್ಟ್ 16: ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.
ರಾಮನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರವನ್ನು ಒತ್ರಾಯಿಸಿದರು. ರಾಜ್ಯದಲ್ಲಿ ನೆರೆ ಹಾವಳಿ ಹೆಚ್ಚಾಗಿದೆ, ಎಷ್ಟೋ ಮಂದಿ ಪ್ರಾಣ ಕಳೆದುಕೊಂಡ್ಡಿದ್ದಾರೆ. ಸಾವಿರಾರು ಜನರು ಮನೆ ಮಠ, ಜಮೀನು ಕಳೆದುಕೊಂಡಿದ್ದಾರೆ. ಇಷ್ಟಾದರೂ ಕೇಂದ್ರ ಸರಕಾರ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು.

ರಾಜ್ಯದ ಹಲವು ಪ್ರದೇಶಗಳಲ್ಲಿ ಒಂದಲ್ಲ ಒಂದು ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇರುತ್ತದೆ. ಹಾಗಾಗಿ ಕೇಂದ್ರ ಸರಕಾರ ಆ ಪ್ರದೇಶಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಸಮರೋಪದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದರು.












Click it and Unblock the Notifications