ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮನೆ ಮನೆಗೂ ಶುದ್ಧ ಕುಡಿಯುವ ನೀರಿನ ಭರವಸೆ ಕೊಟ್ಟ ಡಿಸಿಎಂ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 12: ಲಭ್ಯವಿರುವ ಜಲ ಮೂಲಗಳಿಂದ ಶಾಶ್ವತ ಶುದ್ಧ ಕುಡಿಯುವ ನೀರನ್ನು ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ಪೂರೈಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.

ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರನ್ನು ಪೂರೈಸುವಂಥ ಯೋಜನೆಗಳಿಗೆ ಸಂಬಂಧಿಸಿದಂತೆ ಅಶ್ವತ್ಥ ನಾರಾಯಣ ಅವರು ನಿನ್ನೆ ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿರುವ ಜಲಮೂಲಗಳು ಮತ್ತು ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಪಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನೆಟ್ಕಲ್ ಗ್ರಾಮದ ಪೈಪ್ ಯಾರ್ಡ್ ಪ್ರದೇಶಕ್ಕೂ ತೆರಳಿ ಕಾಮಗಾರಿಗಳನ್ನು ವೀಕ್ಷಿಸಿದರು. ನಂತರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಇಗ್ಲೂರು ಗ್ರಾಮದಲ್ಲಿರುವ ಎಚ್.ಡಿ.ದೇವೇಗೌಡ ಜಲಾಶಯವನ್ನು ವೀಕ್ಷಿಸಿದರು.

ಪ್ರವಾಸಿ ತಾಣವನ್ನಾಗಿ ಮಂಚನಬೆಲೆ ಅಭಿವೃದ್ಧಿ: ಡಿಸಿಎಂ ಅಶ್ವಥ್ ನಾರಾಯಣಪ್ರವಾಸಿ ತಾಣವನ್ನಾಗಿ ಮಂಚನಬೆಲೆ ಅಭಿವೃದ್ಧಿ: ಡಿಸಿಎಂ ಅಶ್ವಥ್ ನಾರಾಯಣ

 250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿ

250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿ

ಕಣ್ವ ಜಲಾಶಯಕ್ಕೆ ಭೇಟಿ ನೀಡಿದ್ದ ಸಂದರ್ಭ ಮಾತನಾಡಿದ ಅವರು, "ಕೋವಿಡ್ ಮತ್ತು ಅತಿವೃಷ್ಟಿಯ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿಲ್ಲ. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗುತ್ತಿವೆ. ಇದಕ್ಕೆ ನಿದರ್ಶನ ಎನ್ನುವಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಮನೆಗಳಿಗೂ ಶುದ್ಧ ನೀರನ್ನು ಪೂರೈಸುವ 250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವುದೇ ಸಾಕ್ಷಿಯಾಗಿವೆ ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಆದ್ಯತೆ ನೀಡಿ ವಿವಿಧ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ. ಅದರಲ್ಲೂ, ಪ್ರಮುಖವಾಗಿ 210 ಕೋಟಿ ರೂ.ಗಳ ವೆಚ್ಚದಲ್ಲಿ ಕೋಡಿಹಳ್ಳಿ ಹಾಗೂ ಇತರೆ 299 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ, 4 ಕೋಟಿ ರೂ.ಗಳ ವೆಚ್ಚದಲ್ಲಿ ಸಾತನೂರು ಹಾಗೂ ಇತರೆ 29 ಹಳ್ಳಿಗಳಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಹಾಗೂ 2 ಕೋಟಿ ರೂ.ಗಳ ವೆಚ್ಚದಲ್ಲಿ ಹಾರೋಹಳ್ಳಿ ಗ್ರಾಮಕ್ಕೆ ಕುಡಿಯುವ ನೀರಿನ ಸರಬರಾಜು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

 173 ಕೋಟಿ ರೂ.ಗಳ ಹೆಚ್ಚುವರಿ ಅನುದಾನ

173 ಕೋಟಿ ರೂ.ಗಳ ಹೆಚ್ಚುವರಿ ಅನುದಾನ

ಕನಕಪುರ ತಾಲೂಕಿನ ಕೋಡಿಹಳ್ಳಿ ಹಾಗೂ 298 ಜನ ವಸತಿಗಳಿಗೆ ಕಾವೇರಿ ನದಿಯಿಂದ ಶುದ್ಧ ನೀರನ್ನು ಪೂರೈಸಲು 210 ಕೋಟಿ ರೂ.ಗಳ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಯೋಜನೆಯ ಪ್ರಗತಿಯು ವಿವಿಧ ಹಂತದಲ್ಲಿದೆ. ಯೋಜನೆಯ ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನುಡಿದರು.

ಮಾಗಡಿ ತಾಲ್ಲೂಕಿನ 211 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗಾಗಿ ಒಟ್ಟು 450 ಕೋಟಿ ರೂ.ಗಳಿಗೆ ಸಚಿವ ಸಂಪುಟದಲ್ಲಿ ಅನುಮತಿ ಪಡೆದುಕೊಳ್ಳಲಾಗಿದೆ. ಈಗಾಗಲೇ ಈ ಯೋಜನೆಗಾಗಿ 277 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಈಗ 173 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಬಿಡುಗಡೆ ಆಗಲಿದೆ. ಹಾಕಿಕೊಂಡಿರುವ ಗುರಿಯಂತೆ ಒಂದು ವರ್ಷದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಅವರು ನುಡಿದರು.

 ರಾಜ್ಯಪಾಲರೊಂದಿಗೆ ಡಾ. ಅಶ್ವಥ್ ನಾರಾಯಣ್ ಮಹತ್ವದ ಚರ್ಚೆ ರಾಜ್ಯಪಾಲರೊಂದಿಗೆ ಡಾ. ಅಶ್ವಥ್ ನಾರಾಯಣ್ ಮಹತ್ವದ ಚರ್ಚೆ

 ಜಿಲ್ಲೆಯ ನಾಲ್ಕು ತಾಲೂಕಿಗೂ ನೀರು

ಜಿಲ್ಲೆಯ ನಾಲ್ಕು ತಾಲೂಕಿಗೂ ನೀರು

ಒಟ್ಟು 540 ಕೋಟಿ ರೂ.ಗಳ ವೆಚ್ಚದ ಸತ್ತೇಗಾಲ ಕುಡಿಯುವ ನೀರು ಯೋಜನೆಯ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಇದರಿಂದ ಮೊಗೇನಹಳ್ಳಿ ಕೆರೆ ಮತ್ತು ಕಣ್ವ ಜಲಾಶಯಕ್ಕೆ ನೀರನ್ನು ತುಂಬಿಸಲಾಗುವುದು. ಪುನಃ ಅಲ್ಲಿಂದ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಕೆರೆಗೆ ತಂದು ಅದನ್ನು ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಗೂ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದು ವಿವರಿಸಿದರು.

ಅರ್ಕಾವತಿ ಜಲಾಶಯದ ಹಿನ್ನೀರಿನಿಂದ ಕನಕಪುರ ತಾಲ್ಲೂಕಿನ ಗರಳಾಪುರ ಹಾಗೂ ಇನ್ನಿತರ 12 ಕೆರೆಗಳಿಗೆ ಎರಡು ಹಂತಗಳಲ್ಲಿ 70 ಕೋಟಿ ರೂ.ಗಳ ವೆಚ್ಚದಲ್ಲಿ ನೀರು ತುಂಬಿಸಲಾಗುವುದು. ಭೂಸ್ವಾಧೀನದ ಸಮಸ್ಯೆ ಪರಿಹರಿಸಿಕೊಂಡು ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು. ಅರ್ಕಾವತಿಯಲ್ಲಿ ಹೂಳು ತೆಗೆಯುವುದರಿಂದ 1.5 ಟಿಎಂಸಿ ನೀರನ್ನು ಸಂಗ್ರಹಿಸುವಂತೆ ಆಗಿದೆ ಎಂದು ಅವರು ತಿಳಿಸಿದರು.

Recommended Video

Nirmala Sitharaman ಅವ್ರೇ ಕನ್ನಡಿಗರು ಏನ್ ಪಾಪ ಮಾಡಿದ್ರು? | Oneindia Kannada
 ಕಣ್ವ ಜಲಾಶಯದ ಬಳಿ ಮಕ್ಕಳ ಪ್ರಪಂಚ

ಕಣ್ವ ಜಲಾಶಯದ ಬಳಿ ಮಕ್ಕಳ ಪ್ರಪಂಚ

110 ಕೋಟಿ ರೂ.ಗಳ ವೆಚ್ಚದಲ್ಲಿ ಬೈರಮಂಗಲ ಕೆರೆಯ ಪುನಶ್ಚೇತನ ಕಾಮಗಾರಿ, 70 ಕೋಟಿ ರೂ.ಗಳ ವೆಚ್ಚದಲ್ಲಿ ದೊಡ್ಡಾಲಹಳ್ಳಿ ಮೈಕ್ರೋ ಇರಿಗೇಷನ್ ಕಾಮಗಾರಿ ಹಾಗೂ 252 ಕೋಟಿ ರೂ.ಗಳ ವೆಚ್ಚದಲ್ಲಿ ನಾರಾಯಣಪುರ, ಗರಳಪುರ ಮತ್ತು ಸಾತನೂರು ಏತ ನೀರವಾರಿ ಯೋಜನೆಗಳಿಂದ ಕೆರೆ ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1800 ಕೋಟಿ ರೂ.ಗಳ ವೆಚ್ಚದಲ್ಲಿ ಕಾವೇರಿ ನದಿ ನೀರನ್ನು ಜಿಲ್ಲೆಯ ಕಣ್ವ, ಮಂಚನಬೆಲೆ, ಇಗ್ಗಲೂರು ಹಾಗೂ ವೈ.ಜಿ ಗುಡ್ಡ ಜಲಾಶಯಗಳಿಗೆ ತುಂಬಿಸಿ, ಇಲ್ಲಿಂದ ಈ ಜಿಲ್ಲೆಯ ವಸತಿ ಪ್ರದೇಶಗಳಿಗೆ ನೀರು ಒದಗಿಸುವ ಪ್ರಸ್ತಾವನೆಗೆ ಕೇಂದ್ರದಿಂದ ಅನುಮೋದನೆ ದೊರೆತ ತಕ್ಷಣ ಚಾಲನೆ ನೀಡಲಾಗುವುದು ಎಂದರು.

ಕಣ್ವ ಜಲಾಶಯದ ಬಳಿ ಮಕ್ಕಳ ಪ್ರಪಂಚ (ಚಿಲ್ಡ್ರನ್ ವರ್ಲ್ಡ್) ನಿರ್ಮಾಣಕ್ಕಾಗಿ 5 ಎಕರೆ 10 ಗುಂಟೆ ಭೂಮಿ ಮತ್ತು 2 ಕೋಟಿ ರೂ.ಗಳನ್ನು ನೀಡಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಈ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಇದನ್ನು ನಿರ್ಮಿಸಲು ಒತ್ತು ನೀಡಲಾಗುವುದು ಎಂದರು.

English summary
All the rural houses in ramanagar district would be provided with permanent drinking water from the available water sources said DCM Ashwath narayan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X