R Ashok: ಡಿ.ಕೆ.ಶಿವಕುಮಾರ್‌ ಅಫಿಡವಿಟ್‌ನಲ್ಲಿ ದೋಷವಿದ್ದರೆ ಪ್ರಶ್ನೆ ಮಾಡುತ್ತೇವೆ

ರಾಮನಗರ, ಏಪ್ರಿಲ್‌, 21: ಕೆಪಿಸಿಸಿ ಅಧ್ಯಕ್ಷ , ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅಪಿಡವಿಟ್‌ನಲ್ಲಿ ದೋಷ ಇದ್ದರೆ ಆಕ್ಷೇಪಣೆ ಮಾಡಲಾಗುತ್ತೆ ಎಂದು ನಾಮಪತ್ರ ಆಸಿಂಧುಗೋಳಿಸಲು ಬಿಜೆಪಿ ಕುತಂತ್ರ ನಡೆಸಿದೆ ಎಂದು ಡಿ.ಕೆ.ಸುರೇಶ್‌ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಂದಾಯ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.‌

ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್.ಆಶೋಕ್‌ ಇಂದು ಕ್ಷೇತ್ರದಲ್ಲಿ ದೇಗುಲಮಠ, ಶಿವನಹಳ್ಳಿ, ಕಬ್ಬಾಳು, ಕುರುಬಳ್ಳಿ, ಸಾತನೂರುಗೆ ಬೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಚುನಾವಣಾ ಪ್ರವಾಸದ ನಡುವೆ ದೇಗುಲ, ಮಠಕ್ಕೆ ಬೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

R Ashok reaction about to DK Sureshs allegation in Kanakapura

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಮಪತ್ರ ಆಸಿಂಧುಗೊಳ್ಳಬಹುದು ಎಂಬ ಬೀತಿಯಲ್ಲಿ ಸಂಸದ ಡಿ.ಕೆ.ಸುರೇಶ್ ಅಂತಿಮ ಘಳಿಗೆಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯವರು ಕುತಂತ್ರ ಮಾಡಿ ಡಿ.ಕೆ.ಶಿವಕುಮಾರ್‌ ಅವರ ನಾಮಪತ್ರ ಆಸಿಂಧುಗೊಳಿಸಬಹುದು ಎಂಬ ಮುಂಜಾಗ್ರತೆಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎನ್ನುವ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ, ನಾಮಪತ್ರ ಪರಿಶೀಲನೆ ವೇಳೆ ಪಕ್ಷದ ಲೀಗಲ್ ಸೆಲ್‌ನವರು ಸಹ ಆಗಮಿಸಿದ್ದಾರೆ. ಏನಾದರೂ ತಪ್ಪುಗಳಿದ್ದರೆ ಖಂಡಿತವಾಗಿ ಆಕ್ಷೇಪಣೆ ಮಾಡುತ್ತೇವೆ ಎಂದು ಆರ್.ಅಶೋಕ್ ಟಾಂಗ್ ನೀಡಿದರು.

ಡಿ.ಕೆ.ಶಿವಕುಮಾರ್‌ಗೆ ಯಾಕೆ ಆತಂಕ?

‌ಕನಕಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಮೋದಿಯವರು ಕಳುಹಿಸಿದ್ದಾರೆ. ವರಿಷ್ಠರ ಸೂಚನೆಯಂತೆ ನಾಮಪತ್ರ ಸಲ್ಲಿಸಿ ರೋಡ್ ಶೋ ಸಹ ಮಾಡಿದ್ದೇವೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ತರಬೇಕು ಅನ್ನವುದು ನಮ್ಮ ಗುರಿ. ನಾವು ಮೋದಿಯವರ ಆಡಳಿತ ಅವಧಿಯಲ್ಲಿ ಇದ್ದೇವೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು.

ನಿಮ್ಮ ಮೇಲೆ ಷಡ್ಯಂತ್ರ ಆಗುತ್ತಿದೆ ಯಾಕೆ ಅರ್ಥ ಮಾಡಿಕೊಳ್ಳಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಹಾದಿಯಾಗಿ ತುಂಬಾ ಜನ ಪ್ರಬಾವಿ ನಾಯಕರು ಇದ್ದಾರೆ. ಅವರಿಗಿಲ್ಲದ ಕಿರುಕುಳ ಇವರಿಗೆ ಯಾಕೆ ಅಂತಾ. ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಅರ್ಥ ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಆಶೋಕ್ ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷ ಹಿಂದೆಯೆ ಎಲ್ಲಾ ಕಡೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರ ನಡುವೆ ಕನಕಪುರದಲ್ಲಿ ನಿನ್ನೆ ಏಕಾಏಕಿ ಡಿ.ಕೆ.ಸುರೇಶ್ ಹೆಸರು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಟ್ಟಿಯಲ್ಲಿ ಎಲ್ಲಿಯೂ ಸಹ ಅವರ ಹೆಸರು ಇಲ್ಲ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅಥವಾ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವುದಾದರೆ ನಾನು ಕೂಡ ಸ್ಪರ್ಧೆ ಎದುರಿಸೋಕೆ ತಯಾರಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ನಾಮಪತ್ರ ಅಂಗೀಕಾರ

2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ನಾಮಪತ್ರ ಪರಿಶೀಲನೆ ಇಂದು (ಶುಕ್ರವಾರ, ಏಪ್ರಿಲ್ 21) ನಡೆಯುತ್ತಿದ್ದು, ಭಾರೀ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಅನುಮೋದಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕಾರಣ, ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಕೂಡ ಬ್ಯಾಕ್‌ಅಪ್ ಆಗಿ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದ್ದು, ಅಂಗೀಕಾರವಾಗಿರುವ ಕಾರಣ ಡಿ.ಕೆ. ಸುರೇಶ್ ಅವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಅಚ್ಚರಿಯ ಬೆಳವಣಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ, ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಿದಾಗ ರಾಜ್ಯದ ಜನರ ಗಮನ ಸೆಳೆಯಲಾಗಿತ್ತು.

ಸೋಮವಾರ, ಏಪ್ರಿಲ್ 17ರಂದು ದೊಡ್ಡ ಮೆರವಣಿಗೆಯ ಮೂಲಕ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಕನಕಪುರ ಚುನಾವಣಾಧಿಕಾರಿ ಸಂತೋಷ್ ಅವರಿಗೆ ಡಿ.ಕೆ. ಶಿವಕುಮಾರ್ ನಾಲ್ಕು ಸೆಟ್ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ಸಂತೋಷ್ ಅವರೇ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಊರ್ಜಿತವೆಂದು ಘೋಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+