ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೋಂ ಕ್ವಾರಂಟೇನ್ ಗಳಿಂದ ಗಂಟೆಗೊಂದು ಸೆಲ್ಫೀ; ರಾಮನಗರ ಡಿಸಿ ಸೂಚನೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಏಪ್ರಿಲ್ 04: ಕೊರೊನಾ ವೈರಸ್ ಶಂಕಿತರಾಗಿ ಹೋಂ ಕ್ವಾರಂಟೈನ್ ನಲ್ಲಿರುವವರ ಮೇಲೆ ಸತತ ನಿಗಾವಹಿಸಲು ಪ್ರತಿ ಗಂಟೆಗೊಂದು ಸೆಲ್ಫಿ ಕ್ಲಿಕ್ಕಿಸಿ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲು ರಾಮನಗರ ಜಲ್ಲಾಡಳಿತ ಸೂಚನೆ ನೀಡಿದೆ.

Recommended Video

ನಮ್ಮ ಹೆಮ್ಮೆಯ ಕನ್ನಡದ ಸೈನಿಕನ ಮಾತನ್ನು ಒಮ್ಮೆ ಕೇಳಿ | Oneindia Kannada

ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಹೋಂ ಕ್ವಾರಂಟೇನ್ ‌ನಲ್ಲಿರುವವರು ಸೆಲ್ಫಿ ತೆಗೆದು ಸರ್ಕಾರದ ಅಧಿಕೃತ "Quarantine Watch" ಮೊಬೈಲ್ ಅಪ್ಲಿಕೇಷನ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಸೆಲ್ಫಿ ಅಪ್ಲೋಡ್ ಮಾಡುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸೇವೆ ನೀಡದಿದ್ದರೆ ಶಿಸ್ತು ಕ್ರಮ: ರಾಮನಗರ ಡಿಸಿಖಾಸಗಿ ಆಸ್ಪತ್ರೆಗಳು ಸೇವೆ ನೀಡದಿದ್ದರೆ ಶಿಸ್ತು ಕ್ರಮ: ರಾಮನಗರ ಡಿಸಿ

ಗೃಹ ನಿರ್ಬಂಧನೆಗೆ ಸೂಚಿಸಿರುವ ವ್ಯಕ್ತಿಗಳು ಕಡ್ಡಾಯವಾಗಿ ಪ್ರತಿ ಗಂಟೆಗೆ ಒಮ್ಮೆ ಸೆಲ್ಫಿ ತೆಗೆದು ಅಪ್‌ಲೋಡ್ ಮಾಡಬೇಕು. ಆದರೆ ರಾತ್ರಿ 9 ರಿಂದ ಬೆಳಿಗ್ಗೆ 7 ಗಂಟೆಯನ್ನು ನಿದ್ರಾ ಅವಧಿಯೆಂದು ಪರಿಗಣಿಸಿದೆ. ಈ ಅವಧಿಯನ್ನು ಹೊರತುಪಡಿಸಿ ಇನ್ನುಳಿದ ಅವಧಿಯಲ್ಲಿ ಪ್ರತಿ ಗಂಟೆಗೆ ಒಂದರಂತೆ ಒಟ್ಟು 14 ಸೆಲ್ಫಿಗಳನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.

Ramanagar DC Instructed To Upload Selfies Per Hour For Home Quarantine

ಹೋಂ ಕ್ವಾರಂಟೈನ್ ನಲ್ಲಿರುವವರು ತೆಗೆದು ಕಳುಹಿಸುವ ಸೆಲ್ಫಿಗಳನ್ನು ಯಾವುದೇ ರೀತಿ ಸರ್ಕಾರ ಬಳಸಿಕೊಳ್ಳುವುದಿಲ್ಲ. ಸೆಲ್ಫಿಗಳ ಖಾಸಗಿತನವನ್ನು ಸರ್ಕಾರ ಗೌರವಿಸುತ್ತದೆ. ಹಾಗೆಯೇ ಅವುಗಳು ಸೋರಿಕೆಯಾಗದಂತೆ ಕ್ರಮವಹಿಸುತ್ತದೆ. ಒಂದು ವೇಳೆ ಆದೇಶವನ್ನು ಪಾಲಿಸದಿದ್ದರೆ ಅಂತಹವರನ್ನು ಹೋಂ ಕ್ವಾರಂಟೈನ್ ನಿಂದ ತೆಗೆದು ಮಾಸ್ ಕ್ವಾರಂಟೇನ್ ಗೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

English summary
Ramanagar DC Instructed To Upload Selfies Per Hour to government official app For those who are corona Home Quarantines in district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X