ರೇಷ್ಮೆನಾಡು ರಾಮನಗರ ಜಿಲ್ಲೆಯ 3 "ಕೈ", 1 ಕ್ಷೇತ್ರದಲ್ಲಿ ದಳ, ಬಾಡಿದ ಕಮಲ, ಫಲಿತಾಂಶದ ವಿವರ ಇಲ್ಲಿದೆ
ರಾಮನಗರ, ಮೇ, 14: ರೇಷ್ಮೆನಾಡು ರಾಮನಗರ ಜಿಲ್ಲೆಯ 4 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 3 ಕ್ಷೇತ್ರದಲ್ಲಿ ಗೆದ್ದು ಬೀಗಿದೆ. ಕಳೆದ ಬಾರಿ ಮೂರು ಕ್ಷೇತ್ರಗಳನ್ನು ತೆಕ್ಕೆಗೆ ಪಡೆದಿದ್ದ ಜೆಡಿಎಸ್, ಈ ಬಾರಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟಿದೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕರ್ಮಭೂಮಿ ಎನಿಸಿದ್ದ ರಾಮನಗರ ಕ್ಚೇತ್ರದಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದಾರೆ. ಅಲ್ಲದೆ ಒಟ್ಟಾರೆ ಕ್ಷೇತ್ರವಾರು ಸೋಲು ಗೆಲುವಿನ ಲೆಕ್ಕಾಚಾರದ ಮಾಹಿತಿ ಇಲ್ಲಿದೆ.
ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಅವರು 94,650 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್ ಅವರು 87,690 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರು 1,43,023 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 96,592 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಮಾಗಡಿ ವಿಧಾನಸಭಾ ಕ್ಷೇತ್ರ
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,33,358 ಮತದಾರಲ್ಲಿ 2,01111 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಸರಾಸರಿ 86.18 % ಮತದಾನ ದಾಖಲಾಗಿತ್ತು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಚ್.ಸಿ.ಬಾಲಕೃಷ್ಣ 94,650 ಮತ ಪಡೆದು ಹಾಲಿ ಶಾಸಕ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಅವರ ವಿರುದ್ಧ 13,839 ಮತಗಳ ಅಂತರದಲ್ಲಿ ಜಯಗಳಿಸಿದರು. ಇನ್ನು ಬಿಜೆಪಿ ಅಭ್ಯರ್ಥಿ ಎ.ಆರ್.ಪ್ರಸಾದ್‍ಗೌಡ ಅವರು 20,197 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ 82,811 ಮತಗಳನ್ನು ಪಡೆದಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರ
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,061 ಮತದಾರರಲ್ಲಿ 1,81,695 ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕ್ಷೇತ್ರದಲ್ಲಿ ಸರಾಸರಿ 84.89% ಮತದಾನ ದಾಖಲಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ.ಇಕ್ಬಾಲ್ ಹುಸೇನ್ 87,690 ಮತ ಪಡೆದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 10,715 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಗೌತಮ್ ಮರಿಲಿಂಗೇಗೌಡ 12,912 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಪಡೆದಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರ
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,24,956 ಮತದಾರಲ್ಲಿ 1,90,124 ಮತದಾರು ತಮ್ಮ ಮತ ಚಲಾಯಿಸುವ ಮೂಲಕ ಕ್ಷೇತ್ರದಲ್ಲಿ 84.52% ಮತದಾನ ದಾಖಲಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ 1,43,023 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಬಿ.ನಾಗರಾಜ್ ವಿರುದ್ದ 1,22,392 ದಾಖಲೆಯ ಮತಗಳ ಅಂತರದಿಂದ ಜಯಶಾಲಿ ಆಗಿದ್ದಾರೆ.
ಇನ್ನು ಕಂದಾಯ ಬಿಜೆಪಿ ಅಭ್ಯರ್ಥಿ ಆರ್.ಆಶೋಕ್ 19,753 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ. ನಾಗರಾಜು ಅವರು 20,631 ಮತಗಳಿಗೆ ತೃಪ್ತಿಪಟ್ಟಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಹಾಗೆಯೆ ಬೊಂಬೆನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2,30,327 ಆರ್ಹ ಮತದಾರರಲ್ಲಿ 1,96,408 ಮತದಾರರು ಮತದಾನ ಮಾಡಿದ್ದು. ಇಲ್ಲಿ ಹಾಲಿ ಶಾಸಕ, ಮಾಜಿ ಮುಖ್ಯಮಂತ್ರಿ , ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 96,592 ಮತಗಳನ್ನು ಪಡೆದು, ಬಿಜೆಪಿ ಅಭ್ಯರ್ಥಿಸಿ.ಪಿ.ಯೋಗೇಶ್ವರ್ ವಿರುದ್ಧ 15,915 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಇನ್ನು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಎಸ್.ಗಂಗಾಧರ್ 15,374 ಮತಗಳನ್ನು ಪಡದರೆ, ಬಿಜೆಪಿ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 80,677 ಮತಗಳನ್ನು ಪಡೆದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications