ಮತಎಣಿಕೆಗೂ ಮುನ್ನವೇ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿ!

Recommended Video

      Ramanagara By-elections 2018 Results : ಮತ ಎಣಿಕೆಗೂ ಮುಂಚೆ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿ

      ರಾಮನಗರ, ನವೆಂಬರ್ 06: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಎಣಿಕೆಗೂ ಮುನ್ನವೇ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂಬ ಬ್ಯಾನರ್ ಗಳು ರಾರಾಜಿಸುತ್ತಿವೆ.

      ಮತ ಎಣಿಕೆ ಆರಂಭವಾಗುವ ಮೊದಲೇ ರಾಮನಗರದಲ್ಲಿ ಅಲ್ಲಲ್ಲಿ 'ಅನಿತಾ ಕುಮಾರಸ್ವಾಮಿ ಜಯಭೇರಿ' ಎಂಬ ಬ್ಯಾನರ್ ಗಳು ಕಾಣಿಸಿಕೊಳ್ಳುತ್ತಿವೆ.

      ನ.3 ರಂದು ನಡೆದ ರಾಮನಗರ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ಈ ಕ್ಷೇತ್ರದಲ್ಲಿ ಜೆಡಿಎಸ್ ನ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

      ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರಿಂದ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಕ್ಷೀಣ.

      Ramanagara: Banners of JDS candidate Anitha Kumaraswamy as winner spotted before counting starts

      ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸಿದ್ದರು. ನಂತರ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ನ.3 ರಂದು ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬೀಳುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+