ರಾಮನಗರ ಉಪ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಯಾರು?
Recommended Video

ಬೆಂಗಳೂರು, ಜೂನ್ 11 : 'ರಾಮನಗರ ಕ್ಷೇತ್ರದ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ' ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅನಿತಾ ಕುಮಾರಸ್ವಾಮಿ, 'ನನ್ನ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಅಭ್ಯರ್ಥಿಗಳಾಗಿ ಕೇಳಿಬರುತ್ತಿದೆ' ಎಂದರು.
'ರಾಮನಗರದ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ, ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಎಚ್.ಡಿ.ಕುಮಾರಸ್ವಾಮಿ ತವರು ಕ್ಷೇತ್ರ : ರಾಮನಗರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ. 2004, 2008, 2013, 2018ರ ಚುನಾವಣೆಯಲ್ಲಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
2004ರ ಚುನಾವಣೆಯಲ್ಲಿ 69,554, 2008 ಚುನಾವಣೆಯಲ್ಲಿ 71,700, 2013ರ ಚುನಾವಣೆಯಲ್ಲಿ 83,447 ಮತಗಳನ್ನು ಪಡೆದು ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.












Click it and Unblock the Notifications