ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಕೋಟೆಯಲ್ಲಿ ಜೆಡಿಎಸ್‌ಗೆ ಠೇವಣಿ ನಷ್ಟ; ಕಾಂಗ್ರೆಸ್‌ಗೆ ಜಯ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 06; ರಾಮನಗರ ಜಿಲ್ಲೆಯ ರಾಮನಗರ ನಗರಸಭೆಯ 4ನೇ ವಾರ್ಡ್‌ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದು, ಭದ್ರಕೋಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ.

ಸೋಮವಾರ 4ನೇ ವಾರ್ಡಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ಸುರೇಶ್ ಗೆಲವು ಸಾಧಿಸಿದರು. ಎದುರಾಳಿಯಾಗಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಅನುಸೂಯ ಉಮೇಶ್ ಪರಾಭವಗೊಂಡರು.

ಒಂದೇ ಪಕ್ಷದಲ್ಲಿ ಅಪ್ಪ, ಮಗ; ಬದಲಾಯಿತು ಮಂಡ್ಯ ರಾಜಕೀಯದ ಲೆಕ್ಕ! ಒಂದೇ ಪಕ್ಷದಲ್ಲಿ ಅಪ್ಪ, ಮಗ; ಬದಲಾಯಿತು ಮಂಡ್ಯ ರಾಜಕೀಯದ ಲೆಕ್ಕ!

ಈ ಹಿಂದೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಮಾಡಿದ್ದ ಲೀಲಾ ಗೋವಿಂದರಾಜು ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ಎದುರಾಗಿತ್ತು. ಸೆಪ್ಟೆಂಬರ್ 3ರಂದು ಮತದಾನ ನಡೆದಿತ್ತು.

 ರಾಮನಗರ: ಒಂದೇ ವೇದಿಕೆಯಲ್ಲಿ ಬದ್ಧ ವೈರಿಗಳ ಸಮಾಗಮ‌ ರಾಮನಗರ: ಒಂದೇ ವೇದಿಕೆಯಲ್ಲಿ ಬದ್ಧ ವೈರಿಗಳ ಸಮಾಗಮ‌

Ramanagara City Municipal Council By Poll Congress Retains Ward 4 JDS Loses Deposit

ಕಳೆದ ಬಾರಿ ಕಾಂಗ್ರಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೀಲಾ ಗೋವಿಂದರಾಜು ಚುನಾವಣೆಯಲ್ಲಿ ಜಯಗಳಿಸಿದ್ದರು. ಆದರೆ ಚುನಾವಣೆಯ ಫಲಿತಾಂಶ ಹೊರಬರುವ ಮುನ್ನವೇ ಕೋವಿಡ್‌ಗೆ ಬಲಿಯಾಗಿದ್ದರು.

ಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ರಾಮನಗರ ಜಿಲ್ಲಾಧಿಕಾರಿಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ರಾಮನಗರ ಜಿಲ್ಲಾಧಿಕಾರಿ

ಠೇವಣಿ ಕಳೆದುಕೊಂಡ ಜೆಡಿಎಸ್; 4ನೇ ವಾರ್ಡ್ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರೂ ಸಹ ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 899 ಮತಗಳ ಅಂತರದಿಂದ ಗೆಲವು ಸಾಧಿಸಿದರು. ಎದುರಾಳಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಕೇವಲ 191 ಮತ ಪಡೆಯುವ ಮೂಲಕ ಠೇವಣಿ ಕಳೆದುಕೊಂಡರು.

ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ಸುರೇಶ್ 1090 ಪಡೆದು ಜೆಡಿಎಸ್ ಅಭ್ಯರ್ಥಿಗಿಂತ 899 ಮತಗಳ ಅಂತರದಿಂದ ಜಯ ಸಾಧಿಸಿದರು. ಇನ್ನೂ ಜೆಡಿಎಸ್ ಅಭ್ಯರ್ಥಿ ಅನುಸೂಯ ಉಮೇಶ್ 191 ಮತಗಳನ್ನೂ ಮಾತ್ರ ಪಡೆಯಲು ಸಾಧ್ಯವಾಗಿದೆ.

Recommended Video

ಜಗತ್ತಿನ ಎಲ್ಲಾ ನಾಯಕರನ್ನು ಹಿಂದಿಕ್ಕಿ ಫಸ್ಟ್ ರ್ಯಾಂಕ್ ಪಡೆದ ಪ್ರಧಾನಿ Modi | Oneindia Kannada

ಇನ್ನೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ಪ್ರತಿನಿದಿಸುತ್ತಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದು ಪಕ್ಷದ ಅಭ್ಯರ್ಥಿ ಠೇವಣಿ ಕಳೆದುಕೊಂಡಿರುವುದು ವಿರೋಧಿಗಳಿಗೆ ಆಹಾರವಾಗಿದೆ.

English summary
Ramanagara City Municipal Council ward number 4 by elections result announced. Congress retain the ward and JD(S) candidate loosed deposit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X