ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಉಪ ಚುನಾವಣೆ : ನಿಟ್ಟುಸಿರು ಬಿಟ್ಟ ಕಾಂಗ್ರೆಸ್, ಜೆಡಿಎಸ್!

|
Google Oneindia Kannada News

ರಾಮನಗರ, ಅಕ್ಟೋಬರ್ 15 : ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ನಿದ್ದೆ ಗೆಡಿಸಿದ್ದ ಸಮಸ್ಯೆ ಬಗೆಹರಿದಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಕಾಂಗ್ರೆಸ್ ನಾಯಕರ ಅಸಮಾಧಾನ ಶಮನ ಮಾಡಿದ್ದಾರೆ.

ರಾಮನಗರ ತಾಲೂಕಿನ ಕವಣಾಪುರದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು ಬೆಂಬಲಿಸಲು ಎಲ್ಲಾ ನಾಯಕರು ತೀರ್ಮಾನ ಕೈಗೊಂಡರು.

ರಾಮನಗರ ಉಪ ಚುನಾವಣೆ : ಜೆಡಿಎಸ್‌ ಗೆಲುವಿಗೆ ಬಂಡಾಯದ ಭಯ!ರಾಮನಗರ ಉಪ ಚುನಾವಣೆ : ಜೆಡಿಎಸ್‌ ಗೆಲುವಿಗೆ ಬಂಡಾಯದ ಭಯ!

2018ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಚ್.ಎ.ಇಕ್ಬಾಲ್ ಹುಸೇನ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದರು.

ರಾಮನಗರ ಚುನಾವಣೆ : ಸಿ.ಎಂ.ಲಿಂಗಪ್ಪ v/s ದೇವೇಗೌಡ ಕುಟುಂಬದ ಹೋರಾಟರಾಮನಗರ ಚುನಾವಣೆ : ಸಿ.ಎಂ.ಲಿಂಗಪ್ಪ v/s ದೇವೇಗೌಡ ಕುಟುಂಬದ ಹೋರಾಟ

ಈ ಅಸಮಾಧಾನದಿಂದಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಗಲಿಬಿಲಿ ಗೊಂಡಿದ್ದರು. ಈಗ ಅಸಮಾಧಾನ ಬಗೆಹರಿದಿದ್ದು, ಅನಿತಾ ಕುಮಾರಸ್ವಾಮಿ ಬೆಂಬಲಿಸುವುದಾಗಿ ಅವರು ಹೇಳಿದ್ದಾರೆ. ಬಿಜೆಪಿಯಿಂದ ಎಲ್.ಚಂದ್ರಶೇಖರ್ ಅವರು ಉಪ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ....

ರಾಮನಗರ ಉಪ ಚುನಾವಣೆ : ಮಹತ್ವದ ಸಭೆ ನಡೆಸಿದ ಸದಾನಂದ ಗೌಡರು!ರಾಮನಗರ ಉಪ ಚುನಾವಣೆ : ಮಹತ್ವದ ಸಭೆ ನಡೆಸಿದ ಸದಾನಂದ ಗೌಡರು!

ಎಚ್.ಎ.ಇಕ್ಬಾಲ್ ಹುಸೇನ್ ಹೇಳಿದ್ದೇನು?

ಎಚ್.ಎ.ಇಕ್ಬಾಲ್ ಹುಸೇನ್ ಹೇಳಿದ್ದೇನು?

ರಾಮನಗರದಲ್ಲಿ ಮಾತನಾಡಿದ ಎಚ್.ಎ.ಇಕ್ಬಾಲ್ ಹುಸೇನ್ ಅವರು, 'ಸಮ್ಮಿಶ್ರ ಸರ್ಕಾರದ ಹಿತ ದೃಷ್ಟಿಯಿಂದ ನಾನು ಉಪ ಚುನಾವಣೆಯಿಂದ ಹಿಂದೆ ಸರಿಯಲಿದ್ದೇನೆ. ಪಕ್ಷದ ಹಿತದ ದೃಷ್ಟಿಯಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬಾರದು ಎಂದು ನಿರ್ಧರಿಸಿದ್ದೇನೆ. ಪಕ್ಷದ ನಾಯಕರು ಸೂಚಿಸಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವೆ' ಎಂದು ಹೇಳಿದರು.

ರಾಮನಗರ : ಅನಿತಾ ಕುಮಾರಸ್ವಾಮಿ ಒಮ್ಮತದ ಅಭ್ಯರ್ಥಿರಾಮನಗರ : ಅನಿತಾ ಕುಮಾರಸ್ವಾಮಿ ಒಮ್ಮತದ ಅಭ್ಯರ್ಥಿ

ಎಚ್.ಎ.ಇಕ್ಬಾಲ್ ಹುಸೇನ್ ಏನು ಹೇಳಿದ್ದರು?

ಎಚ್.ಎ.ಇಕ್ಬಾಲ್ ಹುಸೇನ್ ಏನು ಹೇಳಿದ್ದರು?

2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿದ್ದ ಎಚ್.ಎ.ಇಕ್ಬಾಲ್ ಅವರು 69990 ಮತಗಳನ್ನು ಪಡೆದಿದ್ದರು. 'ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಪಕ್ಷ ಸಂಘಟನೆಗೆ ಹಿನ್ನಡೆಯಾಗಲಿದೆ. ಆದ್ದರಿಂದ, ನಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ' ಎಂದು ಘೋಷಣೆ ಮಾಡಿದ್ದರು.

ಜೆಡಿಎಸ್ ಬೆಂಬಲಿಸುವುದಿಲ್ಲ

ಜೆಡಿಎಸ್ ಬೆಂಬಲಿಸುವುದಿಲ್ಲ

ಎಚ್.ಎ.ಇಕ್ಬಾಲ್ ಅವರ ಅಸಮಾಧಾನ ಶಮನವಾದರೂ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ಬೆಂಬಲಿಸುವುದಿಲ್ಲ' ಎಂದು ಘೋಷಣೆ ಮಾಡಿದ್ದಾರೆ. ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ಅನಿತಾ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಅಭ್ಯರ್ಥಿ.

ಅನಿತಾ, ಚಂದ್ರಶೇಖರ್ ಎದುರಾಳಿಗಳು

ಅನಿತಾ, ಚಂದ್ರಶೇಖರ್ ಎದುರಾಳಿಗಳು

ರಾಮನಗರ ಕ್ಷೇತ್ರದ ಚುನಾವಣಾ ಕಣ ಅಂತಿಮಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ, ಬಿಜೆಪಿಯಿಂದ ಎಲ್.ಚಂದ್ರಶೇಖರ್ ಅಭ್ಯರ್ಥಿಯಾಗಿದ್ದಾರೆ.

English summary
Ramanagara Congress leader and Former Zilla Panchayat president H.A.Iqbal Hussain decided to support Anitha Kumaraswamy in Ramanagara by election scheduled on November 3, 2018. L.Chandrashekar BJP candidate for by poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X