SSLC ಫಲಿತಾಂಶ ರಾಮನಗರಕ್ಕೆ 2ನೇ ಸ್ಥಾನ: ಜಿಲ್ಲಾಧಿಕಾರಿ ಅಭಿನಂದನೆ

ರಾಮನಗರ, ಮೇ 2: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿರುವುದಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ ಮುಲ್ಲೈ ಮುಹಿಲನ್ ಹಾಗೂ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಂಗಮಾರೇಗೌಡ ಅವರ ನೇತೃತ್ವದ ತಂಡವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಜಿಲ್ಲೆಗೆ ಹೆಸರು ತಂದಿದೆ ಎಂದು ಅಭಿನಂದಿಸಿದ್ದಾರೆ.

ಸರಕಾರಿ ಅಧಿಕಾರಿಗಳು, ಶಿಕ್ಷಕರ ಪರಿಶ್ರಮವನ್ನು ಶ್ಲಾಘಿಸಿರುವ ಅವರು ತೇರ್ಗಡೆಗೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.

Ramanagara dc congratulates sslc students for good result

ಅಧಿಕಾರಿಗಳು ಶಾಲೆಗಳನ್ನು ದತ್ತು ತೆಗೆದುಕೊಂಡು ಪಾಠ ಮಾಡಿದ್ದರು. ಕಡಿಮೆ ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಂಥವರಿಗೆ 'ಯಶಸ್ಸು' ಕೈಪಿಡಿಯನ್ನು ಉಚಿತವಾಗಿ ನೀಡಲಾಗಿತ್ತು. ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿತ್ತು, ರಾತ್ರಿ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಸಿದ ಪರಿಣಾಮ 17ನೇ ಸ್ಥಾನದಲ್ಲಿದ್ದ ರಾಮನಗರ ಜಿಲ್ಲೆ ಫಲಿತಾಂಶದಲ್ಲಿ ಎರಡನೇ ಸ್ಥಾನ ಗಳಿಸಿದೆ ಎಂದಿದ್ದಾರೆ.

ಈ ವರ್ಷವೂ ಜಿಲ್ಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಬೋಧನೆ ಮಾಡಿ ಅತ್ಯುತ್ತಮ ಫಲಿತಾಂಶ ದೊರಕಿಸಿಕೊಡಲು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+