ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SSLC ಫಲಿತಾಂಶ ರಾಮನಗರಕ್ಕೆ 2ನೇ ಸ್ಥಾನ: ಜಿಲ್ಲಾಧಿಕಾರಿ ಅಭಿನಂದನೆ

|
Google Oneindia Kannada News

ರಾಮನಗರ, ಮೇ 2: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿರುವುದಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ ಮುಲ್ಲೈ ಮುಹಿಲನ್ ಹಾಗೂ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಂಗಮಾರೇಗೌಡ ಅವರ ನೇತೃತ್ವದ ತಂಡವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಜಿಲ್ಲೆಗೆ ಹೆಸರು ತಂದಿದೆ ಎಂದು ಅಭಿನಂದಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಸುಸೂತ್ರವಾಗಿ ನಡೆಸಿದ ಸಿಎಂ ಎಚ್ಡಿಕೆಗೆ ಅಭಿನಂದನೆಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಸುಸೂತ್ರವಾಗಿ ನಡೆಸಿದ ಸಿಎಂ ಎಚ್ಡಿಕೆಗೆ ಅಭಿನಂದನೆಗಳು

ಸರಕಾರಿ ಅಧಿಕಾರಿಗಳು, ಶಿಕ್ಷಕರ ಪರಿಶ್ರಮವನ್ನು ಶ್ಲಾಘಿಸಿರುವ ಅವರು ತೇರ್ಗಡೆಗೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.

Ramanagara dc congratulates sslc students for good result

ಅಧಿಕಾರಿಗಳು ಶಾಲೆಗಳನ್ನು ದತ್ತು ತೆಗೆದುಕೊಂಡು ಪಾಠ ಮಾಡಿದ್ದರು. ಕಡಿಮೆ ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಂಥವರಿಗೆ 'ಯಶಸ್ಸು' ಕೈಪಿಡಿಯನ್ನು ಉಚಿತವಾಗಿ ನೀಡಲಾಗಿತ್ತು. ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿತ್ತು, ರಾತ್ರಿ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಸಿದ ಪರಿಣಾಮ 17ನೇ ಸ್ಥಾನದಲ್ಲಿದ್ದ ರಾಮನಗರ ಜಿಲ್ಲೆ ಫಲಿತಾಂಶದಲ್ಲಿ ಎರಡನೇ ಸ್ಥಾನ ಗಳಿಸಿದೆ ಎಂದಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಶೇ 73.70 ಫಲಿತಾಂಶ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಶೇ 73.70 ಫಲಿತಾಂಶ

ಈ ವರ್ಷವೂ ಜಿಲ್ಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಬೋಧನೆ ಮಾಡಿ ಅತ್ಯುತ್ತಮ ಫಲಿತಾಂಶ ದೊರಕಿಸಿಕೊಡಲು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

English summary
Ramanagara district collector Dr K Rajendra congratulates the sslc students for getting seond position in state district ranking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X