ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

By ರಾಮನಗರ ಪ್ರತಿನಿಧಿ
|
Google Oneindia Kannada News

ಮೇ 11, ರಾಮನಗರ: ನಾಳೆ ನಡೆಯಲಿರುವ ಚುನಾವಣೆಗೆ ರಾಮನಗರ ಜಿಲ್ಲಾಡಳಿತ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲೆಯ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಒಟ್ಟು 8,71,954 ಮತದಾರರಿದ್ದಾರೆ.

ಇದರಲ್ಲಿ 4,33,496 ಪುರುಷರು 4,38,390 ಮಹಿಳಾ ಮತದಾರರು ಹಾಗೂ ಇತರೆ 68 ಮತದಾರರು ನಾಳೆ ಮತದಾನ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1140 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ 375 ಸೂಕ್ಷ್ಮ 225 ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಚುನಾವಣಾ ಭದ್ರತೆಗೆ 17 ಸಾವಿರ ಪೊಲೀಸರುಬೆಂಗಳೂರಿನಲ್ಲಿ ಚುನಾವಣಾ ಭದ್ರತೆಗೆ 17 ಸಾವಿರ ಪೊಲೀಸರು

ಅತಿ ಸೂಕ್ಷ್ಮ ಮತಗಟ್ಟೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಮೈಕ್ರೋ ಅಬ್ಸರ್ವರ್ ಹಾಗೂ ವಿಡಿಯೋ ಕ್ಯಾಮರಾ ವ್ಯವಸ್ಥೆ ಕೂಡ ಮಾಡಲಾಗಿದೆ. ನಾಳಿನ ಚುನಾವಣಾ ಕರ್ತವ್ಯಕ್ಕೆ 7,410 ಸಿಬ್ಬಂದಿಗಳ ನಿಯೋಜನೆ ಮಾಡಿದ್ದು, ಬಹಳ ವಿಶೇಷವಾಗಿ ಮಹಿಳಾ ಸಿಬ್ಬಂದ್ದಿಗಳೇ ಇರುವ 15 ಪಿಂಕ್ ಮತಗಟ್ಟೆಗಳನ್ನು ಕೂಡ ಸ್ಥಾಪಿಸಲಾಗಿದೆ.

Ramanagara district administration set for elections

ಮತಗಟ್ಟೆಗೆ ಬರುವ ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೀಲ್ ಚೇರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಮುಂಜಾಗೃತ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Ramanagara district administration set for elections

ಚುನಾವಣೆಗೆಂದೇ 9 ಕೇಂದ್ರ ಮಿಲಿಟರಿ ತುಕ್ಕಡಿಯ ಒಟ್ಟು 720 ಮಂದಿ ಮಿಲಿಟರಿ ಸಿಬ್ಬಂದಿಗಳನ್ನು ಕೂಡ ನಿಯೋಜಿಸಿಕೊಳ್ಳಲಾಗಿದೆ. ಇಂದು ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಆಯಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ನೀಡಿ, ಸೂಕ್ತ ಭದ್ರತೆಯಲ್ಲಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗುವುದು ಎಂದು ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ.

English summary
Karnataka assembly elections 2018: District Election Officer, Captain Dr.K. Rajendra said Ramanagara district administration set for elections to be held on tomorrow. There are 8,71,954 voters in the four assembly constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X