Bengaluru South District: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಸಚಿವ ಸಂಪುಟದಿಂದ ಗ್ರೀನ್ ಸಿಗ್ನಲ್

ರಾಮನಗರ ಜುಲೈ 26: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೊಸದಾಗಿ ನಾಮಾಕರಣ ಮಾಡಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಾಕಷ್ಟ ವಿರೋಧದ ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಹೆಸರು ಬದಲಾವಣೆಗೆ ಒಪ್ಪಿಗೆ ಸಿಕ್ಕಿದೆ. ಕೊನೆಗೂ ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

Ramanagara district henceforth bengaluru south Cabinet approves name change

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿದ್ದು ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ ಎಂದರು.

ಜಿಲ್ಲೆಯ ಜನರ ಬೇಡಿಕೆಗಳನ್ನು ಆಧರಿಸಿ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲಾಗಿದೆ. ಸದ್ಯ ರಾಮನಗರ ಜಿಲ್ಲೆ ಹೆಸರು ಮಾತ್ರ ಬದಲಾಗುತ್ತದೆ. ರಾಮನಗರ ಬೆಂಗಳೂರಿನ ಭಾಗವಾಗಿದೆ. ಕಂದಾಯ ಇಲಾಖೆಯಿಂದ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದರು.

Ramanagara district henceforth bengaluru south Cabinet approves name change

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+